ವಾರಾಣಸಿ: ಜ.22 ರಂದು ನಡೆಯಲಿರುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಯಜಮಾನರಾಗಿರಲಿದ್ದಾರೆ ಎಂದು ಪೂಜಾ ಕೈಂಕರ್ಯಗಳನ್ನು ನಡೆಸುವ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ತಿಳಿಸಿದ್ದಾರೆ.

ಯಜಮಾನ ಎಂದರೆ ಪೂಜೆಯ ಮುಖ್ಯ ಆತಿಥ್ಯ ವಹಿಸುವ ವ್ಯಕ್ತಿ. ಅವರೇ ಎಲ್ಲರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದೀಕ್ಷಿತ್ , ‘ಪ್ರಧಾನಿ ನರೇಂದ್ರ ಮೋದಿಯವರು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಎಲ್ಲಾ ಕಾರ್ಯಕ್ರಮಗಳಿಗೆ ಯಜಮಾನರಾಗಿರಲಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಫೂರ್ವಭಾವಿ ವಿಧಿವಿಧಾನ ಕಾರ್ಯಕ್ರಮಗಳು ಆರಂಭವಾಗಿವೆ. ರಾಮನ ಮೂರ್ತಿಯನ್ನು ಗರ್ಭಗುಡಿಯೊಳಗೆ ಸ್ಥಾಪಿಸಿದ ಬಳಿಕವೇ ಎಲ್ಲಾ ರೀತಿಯ ಆಚರಣೆಗಳು ಮುಕ್ತಾಯಗೊಳ್ಳಲಿದೆ. ಅಲ್ಲದೆ ನಿನ್ನೆಯಿಂದ(ಜ.16) ಆರಂಭವಾದ ಅನುಷ್ಠಾನಗಳು ಜ.22ರವರೆಗೂ ಮುಂದುವರಿಯಲಿದೆ. ಪ್ರಾಣ ಪ್ರತಿಷ್ಠಾಪನೆಯ ದಿನ 11 ಪುರೋಹಿತರು ಎಲ್ಲಾ ದೇವತೆಗಳು ಮತ್ತು ದೇವರುಗಳನ್ನು ಆವಾಹನೆ ಮಾಡಲಿದ್ದಾರೆ ಎಂದು ರಾಮ ಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಹೇಳಿದ್ದಾರೆ.
.ರಾಮ ಮಂದಿರ ನಿರ್ಮಾಣ ಪೂರ್ಣ: ವಿವಾದಕ್ಕೆ ತೆರೆ ಎಳೆದ ಸಮಿತಿ ಮುಖ್ಯಸ್ಥ ನೃಪೇಂದ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.