ನವದೆಹಲಿ: ಪ್ರತಿಷ್ಠಿತ ‘ಗಾಂಧಿ ಶಾಂತಿ ಪ್ರಶಸ್ತಿ‘ಯ ಆಯ್ಕೆ ಸಮಿತಿಯ ಸದಸ್ಯರಾಗಿ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ನಾಮಕರಣ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಾಮಕರಣ ಅನುಮೋದಿಸಿದ್ದಾರೆ ಎಂದು ಈ ಸಂಬಂಧ ನಾಯ್ಡು ಅವರಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ತಿಳಿಸಿದ್ದಾರೆ. ಪ್ರಧಾನಿ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಮಹಾತ್ಮಗಾಂಧಿ ಅವರ 125ನೇ ಜನ್ಮದಿನ ನಿಮಿತ್ತ 1995ರಲ್ಲಿ ಕೇಂದ್ರ ಈ ಪ್ರಶಸ್ತಿಯನ್ನು ಸ್ಥಾಪಿಸಿತ್ತು. ಪ್ರಶಸ್ತಿ ₹ 1 ಕೋಟಿ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ ಒಳಗೊಂಡಿದೆ. ರಾಷ್ಟ್ರೀಯತೆ, ವರ್ಣ, ಭಾಷೆ ಮತ್ತು ಜಾತಿ ಮೀರಿ ಪ್ರಶಸ್ತಿ ಪುರಸ್ಕೃತರನ್ನು ಅಯ್ಕೆ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.