ರಾಂಚಿ: ಜಮೀನು ಕಬಳಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ (ಪಿಎಂಎಲ್ಎ) ಸೋಮವಾರ ತಿರಸ್ಕರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಸೊರೇನ್ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮೇ 17ರ ಒಳಗೆ ಹೇಳಿಕೆ ದಾಖಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.

ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮೇ 3ರಂದು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ, ಸೊರೇನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಈ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವ ಮುನ್ನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ಮಧ್ಯಂತರ ಜಾಮೀನು ನೀಡುವಂತೆಯೂ ಸೊರೇನ್ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.