ನೂಹ್: ಹರಿಯಾಣದ ನೂಹ್ನಲ್ಲಿ ನಡೆಯುತ್ತಿರುವ ಹಿಂದೂ ಸಂಘಟನೆಗಳ ಬ್ರಿಜ್ ಮಂಡಲ್ ಯಾತ್ರೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ ಇನ್ಸ್ಪೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಕಮುದ್ದೀನ್ (47) ಮೃತ ಸಬ್ ಇನ್ಸ್ಪೆಕ್ಟರ್.

ಮಧ್ಯಾಹ್ನ 12.30ರ ಹೊತ್ತಿಗೆ ಹಕಮುದ್ದೀನ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ನೀಡುತ್ತಿರುವ ವೇಳೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ರತನ್ ಲಾಲ್ ಮಾಹಿತಿ ನೀಡಿದ್ದಾರೆ.

ಹಿಂದೂ ಸಂಘಟನೆಗಳು ಇತ್ತೀಚೆಗೆ ನಡೆಸಿದ್ದ ಸರ್ವ ಜಾತೀಯ ಹಿಂದೂಮಹಾಪಂಚಾಯತ್ನಲ್ಲಿ ಶೋಭಾಯಾತ್ರೆ ನಡೆಸಲು ನಿರ್ಧರಿಸಲಾಗಿತ್ತು.

ಶೋಭಾಯಾತ್ರೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.