ನವದೆಹಲಿ; ಬಿಜೆಡಿ ಹಿರಿಯ ನಾಯಕಿ ಹಾಗೂ ರಾಜ್ಯಸಭಾ ಸದಸ್ಯೆ ಮಮತಾ ಮೊಹಾಂತಾ ಅವರು ಬಿಜೆಪಿ ಸೇರಿದ ಬೆನ್ನಲ್ಲೇ, ಮುಂಬರುವ ದಿನಗಳಲ್ಲಿ ಮತ್ತೆ ಯಾರು ಪಕ್ಷವನ್ನು ತೊರೆಯುತ್ತಾರೆ ಎಂಬ ಚಿಂತೆ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರಿಗೆ ಕಾಡುತ್ತಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕಾಂಗ್ರೆಸ್ ಹಾಗೂ ಬಿಜೆಡಿ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಕಳೆದ 20 ವರ್ಷಗಳಿಂದ ಪರಸ್ಪರ ಪ್ರತಿ ಸ್ಪರ್ಧಿಗಳಂತೆ ಭಾವನೆ ಮೂಡಿಸಿವೆ ಎಂದು ಕಿಡಿಕಾರಿದ್ದಾರೆ.
.ಅತಿ ವೇಗದಿಂದಲೇ ಶೇ 90 ಸಾವು: ಸಮೀಕ್ಷೆ ವರದಿ.ಗೌಡರ ಆಸ್ತಿ ಮೌಲ್ಯ ಬಿಚ್ಚಿಡು: ಕುಮಾರಸ್ವಾಮಿಗೆ ಡಿ.ಕೆ.ಶಿವಕುಮಾರ್ ಸವಾಲು.
ಬಿಜೆಡಿ ಪಕ್ಷದ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರಿಗೆ ಈಗಾಗಲೇ ಚಿಂತೆ ಎದುರಾಗಿದ್ದು, ಮುಂಬರುವ ದಿನಗಳಲ್ಲಿ ಯಾರು ಪಕ್ಷವನ್ನು ತೊರೆಯುತ್ತಾರೆ ಎಂದು ಆತಂಕಕ್ಕೆ ಒಳಗಾಗಿದ್ದಾರೆ ಎಂದು ರಮೇಶ್ ತಿಳಿಸಿದ್ದಾರೆ.

ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಿಜವಾದ ಬಣ್ಣ ಹೊರಬಂದಿದೆ. ಬಿಜೆಡಿ ರಾಜ್ಯಸಭಾ ಸಂಸದರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಮಮತಾ ಅವರಿಗೆ ಬಿಜೆಪಿ ಬಹುಮಾನವನ್ನು ನೀಡಿದೆ ಎಂದು ರಮೇಶ್ ಹೇಳಿದ್ದಾರೆ
.ವಯನಾಡು ಭೂಕುಸಿತ: 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೇಂದ್ರ ನಕಾರ.Wayanad Landslides | ಬಂಧುಗಳಿಗಾಗಿ ಹುಡುಕಾಟ.
ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಅನ್ನು ತೊರೆದು ಮಮತಾ ಮೊಹಾಂತಾ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ವೇಳೆ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಒಡಿಶಾ ಉಸ್ತುವಾರಿ ವಿಜಯ್ ಪಾಲ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

ರಾಜ್ಯಸಭೆಯಲ್ಲಿ ಬಿಜೆಡಿ ಬಲ ಎಂಟಕ್ಕೆ ಕುಸಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.