ನವದೆಹಲಿ: ಕೋಳಿ ಫಾರಂಗಳಿಂದ ಪರಿಸರ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ಇದೇ 16ರಂದು ತಾನು ನೀಡಿದ್ದ ಆದೇಶ ಮರುಪರಿಷ್ಕರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸೋಮವಾರ ವಜಾಗೊಳಿಸಿದೆ.

‘5 ಸಾವಿರಕ್ಕಿಂತಲೂ ಹೆಚ್ಚು ಕೋಳಿಗಳನ್ನು ಹೊಂದಿರುವ ಫಾರಂಗಳು ಪರಿಸರ ಹಾಗೂ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಲ್ಲವು. ಹೀಗಾಗಿ ಇಂತಹ ಫಾರಂಗಳು ಸ್ಥಳೀಯ ಆಡಳಿತಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು’ ಎಂದು ಎನ್ಜಿಟಿ ತನ್ನ ಆದೇಶದಲ್ಲಿ ತಿಳಿಸಿತ್ತು.

ಈ ಆದೇಶ ಪರಿಷ್ಕರಿಸುವಂತೆ ಕೋರಿ ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (ಎನ್ಇಸಿಸಿ) ಹಾಗೂ ಪೌಲ್ಟ್ರಿ ಫಾರ್ಮರ್ಸ್ ಆ್ಯಂಡ್ ಬ್ರೀಡರ್ಸ್ ಅಸೋಸಿಯೇಷನ್ ಅರ್ಜಿ ಸಲ್ಲಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.