ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ, ಏಷ್ಯನ್ ಗೇಮ್ಸ್, ಐಸಿಸಿ ವಿಶ್ವಕಪ್, ಸಾಹಿತ್ಯ ಕ್ಷೇತ್ರಕ್ಕೆ ನೊಬೆಲ್ ಪ್ರಶಸ್ತಿ ಪ್ರಕಟ, ಬಿಜೆಪಿ–ಜೆಡಿಎಸ್ ಮೈತ್ರಿಗೆ ಎಸ್.ಟಿ ಸೋಮಶೇಖರ್ ವಿರೋಧ, ಜ್ಞಾನವಾಪಿ ಸಮೀಕ್ಷೆ ಸೇರಿದಂತೆ ಈ ದಿನದ 10 ಪ್ರಮುಖ ಸುದ್ದಿಗಳು ಇಲ್ಲಿವೆ...

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 10ರವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ಕಸ್ಟಡಿಗೆ ಒಪ್ಪಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು, 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ಆದೇಶಿಸಿದರು. ಕಸ್ಟಡಿ ಅವಧಿ ಮುಗಿದ ಬಳಿಕ ಸಿಂಗ್ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇಶದ ಸೇವಾ ವಲಯದ ಚಟುವಟಿಕೆಗಳು ಸೆಪ್ಟೆಂಬರ್ ತಿಂಗಳಿನಲ್ಲಿ ಉತ್ತಮ ಬೆಳವಣಿಗೆ ಕಂಡಿದ್ದು, 13 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಇಂಡಿಯಾ ಸಂಸ್ಥೆ ತಿಳಿಸಿದೆ. ಹೊಸ ವಹಿವಾಟುಗಳಿಗೆ ಬೇಡಿಕೆಯು ತೀವ್ರ ಗತಿಯಲ್ಲಿ ಹೆಚ್ಚಾಗಿದೆ. ಇದರ ಜೊತೆಗೆ ಉದ್ಯೋಗ ಸೃಷ್ಟಿಯೂ ಹೆಚ್ಚಾಗುತ್ತಿರುವುದರಿಂದ ಒಟ್ಟಾರೆ ವಹಿವಾಟಿನಲ್ಲಿ ಈ ಮಟ್ಟದ ಬೆಳವಣಿಗೆ ಕಂಡುಬಂದಿದೆ ಎಂದು ಅದು ಹೇಳಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಡಿಸಿಸಿ) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ತೀರ್ಥಹಳ್ಳಿ, ಶಿವಮೊಗ್ಗದ ಮನೆ, ಕಚೇರಿ, ಫಾರಂ ಹೌಸ್ಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಜುನಾಥಗೌಡ ವಿರುದ್ಧ ಈ ಹಿಂದೆ ಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏಷ್ಯನ್ ಗೇಮ್ಸ್ ಸ್ಕ್ವಾಷ್ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ದೀಪಿಕಾ ಪಲ್ಲಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಸಂಧು ಜೋಡಿ ಚಿನ್ನದ ಪದಕ ಜಯಿಸಿದ್ದಾರೆ. ಅಮೋಘ ಪ್ರದರ್ಶನ ನೀಡಿದ ಬಾರತೀಯ ಜೋಡಿ, ಮಲೇಷ್ಯಾದ ಐಫಾ ಬಿಂತಿ ಅಜ್ಮನ್ ಹಾಗೂ ಮೊಹಮ್ಮದ್ ಸೈಫೀಕ್ ಬಿನ್ ಮೊಹಮ್ಮದ್ ಕಮಾಲ್ ವಿರುದ್ಧ 11-10, 11-10ರ ಅಂತರದಲ್ಲಿ ಜಯ ಗಳಿಸಿದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾರ್ವೆ ಬರಹಗಾರ ಹಾಗೂ ನಾಟಕಕಾರ ಜಾನ್ ಫಾಸಿ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ 2023ನೇ ಸಾಲಿನ ನೊಬೆಲ್ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯನ್ನು ಘೋಷಿಸಿದ ಸ್ವೀಡಿಶ್ ಅಕಾಡೆಮಿಯು, ‘ಜಾನ್ ಅವರ ನಾಟಕ ಹಾಗೂ ಬರಹಗಳು ಧ್ವನಿ ಇಲ್ಲದವರಿಗೆ ದನಿಯಾಗಿವೆ’ ಎಂದು ಬಣ್ಣಿಸಿದೆ. 2022ರಲ್ಲಿ ಅನ್ನೀ ಎರ್ನಾಕ್ಸ್ ಅವರಿಗೆ ಈ ಪ್ರಶಸ್ತಿಯು ಲಭಿಸಿತ್ತು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಿ ವಾಕ್ಸಿನ್ ವಾರ್’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಚಿತ್ರ ನೋಡಿದ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ ಎಂದು ಹೇಳಿದ್ದಾರೆ. ‘ದಿ ಕಾಶ್ಮೀರಿ ಫೈಲ್ಸ್’ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ‘ದಿ ವ್ಯಾಕ್ಸಿನ್ ವಾರ್‘ ಚಿತ್ರವನ್ನು ಕೈಗೆತ್ತಿಕೊಂಡಿದ್ದರು. ಸೆಪ್ಟೆಂಬರ್ 28ರಂದು ಈ ಚಿತ್ರ ಬಿಡುಗಡೆಗೊಂಡಿತ್ತು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರೋಧ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ. ಅಧಿಕೃತ ಘೋಷಣೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವೆ’ ಎಂದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಾಣಸಿ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ (ಎಎಸ್ಐ) ಇಲಾಖೆಗೆ ಗುರುವಾರ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅಲ್ಲದೆ ಮತ್ತೆ ಕಾಲಾವಕಾಶ ವಿಸ್ತರಿಸುವುದಿಲ್ಲ ಎಂದೂ ಹೇಳಿದೆ. ಎಎಸ್ಐ ಸಲ್ಲಿಸಿದ ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಸದ್ಯ ಕೈಗೊಂಡಿರುವ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಮಯ ವಿಸ್ತರಿಸುವಂತೆ ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಮನವಿ ಸಲ್ಲಿಸಿದರು.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಬಾರಿಯ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ದುಕೊಂಡಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳು 2019ರ ಫೈನಲ್ನಲ್ಲಿ ಸೆಣಸಾಟ ನಡೆಸಿದ್ದವು. ಟೈ ಆಗಿದ್ದ ಪಂದ್ಯದಲ್ಲಿ ‘ಬೌಂಡರಿ ಕೌಂಟ್‘ ಆಧಾರದಲ್ಲಿ ಇಂಗ್ಲೆಂಡ್ ತಂಡವು ಜಯಿಸಿತ್ತು. ಇದೀಗ, ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿ ನ್ಯೂಜಿಲೆಂಡ್ ಬಳಗ ಕಣಕ್ಕಿಳಿಯಲಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡ

ಪಾಕಿಸ್ತಾನ ಮಾಧ್ಯಮಗಳ ಮೇಲೆ ಪರಿಣಾಮಕಾರಿಯಾಗಿ ನಿಯಂತ್ರಣ ಸಾಧಿಸಲು ಮತ್ತು ತನಗೆ ಅನುಕೂಲವಾಗುವ ರೀತಿಯಲ್ಲಿ ಮಾಧ್ಯಮಗಳು ಸುದ್ದಿ ಬಿತ್ತರಿಸುವಂತೆ ಮಾಡಲು ಅಂತರರಾಷ್ಟ್ರೀಯ ಕಾರ್ಯಾಚರಣೆಗಳ ಜಾಲವೊಂದನ್ನು ಚೀನಾ ಅಭಿವೃದ್ಧಿಪಡಿಸಿದೆ ಎಂದು ಅಮೆರಿಕದ ವರದಿಯೊಂದು ತಿಳಿಸಿದೆ.

ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.