ಮುಂಬೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದಾದರೆ ಮನುಸ್ಮೃತಿ ಪ್ರತಿಗಳನ್ನು ಸುಟ್ಟುಹಾಕಿ ಎಂದು ಡಾ. ಬಿ. ಆರ್. ಅಂಬೇಡ್ಕರ್ ಅವರ ಮೊಮ್ಮಗ ಹಾಗೂ ವಂಚಿತ್ ಬಹುಜನ್ ಅಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಅವರು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸಂವಿಧಾನವನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ, ಗೌರವಿಸುತ್ತಿದ್ದರೆ, ಮನುಸ್ಮೃತಿಯ ಪ್ರತಿಗಳನ್ನು ಸುಡುವಂತೆ ನಾನು ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಅವರಿಗೆ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಸಂವಿಧಾನಕ್ಕೆ ಹಾನಿಯುಂಟು ಮಾಡಿವೆ. ಕಾಲಕಾಲಕ್ಕೆ ನಿರ್ಲಕ್ಷಿತ, ವಂಚಿತ ಜಾತಿಗಳು ಮತ್ತು ಸಮುದಾಯಗಳನ್ನು ಶೋಷಿಸಿದ್ದಾರೆ. ಸಂವಿಧಾನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವಗಳನ್ನು ಭ್ರಷ್ಟಗೊಳಿಸಿದ್ದಾರೆ ಎಂದೂ ಅವರು ದೂರಿದ್ದಾರೆ.
.'ಸಂವಿಧಾನ ಹತ್ಯಾ ದಿವಸ್' ಘೋಷಣೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.