ನವದೆಹಲಿ:ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿರುವ ವಿಚಾರವನ್ನು ರಾಜಕೀಯಗೊಳಿಸುತ್ತಿರುವ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರ ಧೋರಣೆ ಸರಿಯಲ್ಲ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಹೇಳಿದರು.

ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ‘ಇ–ವಾಹನ’ ಸಂಚಾರ ಪ್ರೋತ್ಸಾಹಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ:ಬಿಗಡಾಯಿಸಿತು ವಾಯುಮಾಲಿನ್ಯ: ದೆಹಲಿಯಲ್ಲಿ ತುರ್ತುಸ್ಥಿತಿ, ಆವರಿಸಿದೆ ಹೊಗೆಯ ಮೋಡ

ತಮಗೆ ಮತ್ತು ತಮ್ಮ ಸಚಿವಾಲಯಕ್ಕಾಗಿ ‘ಇ–ವಾಹನ’ ಪಡೆದ ಜಾವಡೇಕರ್ ಅವರು, ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ. ಅಲ್ಲದೆ ಇದು ನಮ್ಮ ಕರ್ತವ್ಯವೂ ಆಗಿದೆ ಎಂದು ಹೇಳಿದರು.

ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಪೂರ್ವ ಪೆರಿಫೆರಲ್ ಎಕ್ಸ್ಪ್ರೆಸ್ ಕಾಮಗಾರಿಗೆ ಅಗತ್ಯ ಅನುದಾನವನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ದೆಹಲಿ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ 1500 ವಿದ್ಯುತ್ ಚಾಲಿತ ಕಾರುಗಳಿದ್ದು, ರಾಷ್ಟ್ರೀಯ ರಾಜಧಾನಿಯಲ್ಲಿ 65 ಚಾರ್ಜಿಂಗ್ ಕೇಂದ್ರಗಳಿವೆ ಎಂದು ಇಇಎಸ್ಎಲ್ ವ್ಯವಸ್ಥಾಪಕ ನಿರ್ದೇಶಕ ಸೌರಭ್ ಕುಮಾರ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.