ಅಮೇಠಿ: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮೊದಲ ಬಾರಿಗೆ ತಮ್ಮ ಮಕ್ಕಳ ಜೊತೆ ಸೆಲ್ಫಿ ತೆಗೆದುಕೊಂಡ ಫೋಟೊಗಳನ್ನು ಟ್ವೀಟ್ ಮಾಡಿದ್ದು ಅವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಅಮೇಠಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ವೇಳೆತಾಯಿ, ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ, ಆಕೆಯ ಪತಿ ರಾಬರ್ಟ್ ವಾದ್ರಾ ಹಾಗೂ ಮಕ್ಕಳಾದಮಿರಯಾ ವಾದ್ರ ಮತ್ತು ರೆಹಾನ್ವಾದ್ರಾ ಈ ಸಂದರ್ಭದಲ್ಲಿ ರಾಹುಲ್ ಜೊತೆಗಿದ್ದರು.

ನಾಮಪತ್ರ ಸಲ್ಲಿಕೆಯಾದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಿಯಾಂಕ ಗಾಂಧಿ ತಮ್ಮ ಮಕ್ಕಳ ಜತೆಸೆಲ್ಫಿತೆಗೆದುಕೊಂಡರು. ನಂತರ ಆ ಫೋಟೊಗಳನ್ನು ಟ್ವೀಟ್ ಮಾಡಿದ್ದರು. ಇವನ್ನು 2000ಕ್ಕೂ ಹೆಚ್ಚು ಜನರು ರಿಟ್ವೀಟ್ ಮಾಡಿದ್ದು, 4000ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಅಮೇಠಿಯ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸುವ ಮೂಲಕ ರಾಹುಲ್ ಅವರು ಗೌರಿಗಂಜ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ತಲುಪಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ಮೆರವಣಿಗೆಯಲ್ಲಿ ಪ್ರಿಯಾಂಕ ಗಾಂಧಿಆಕೆಯ ಪತಿ ರಾಬರ್ಟ್ ವಾದ್ರಾ ಹಾಗೂ ಮಕ್ಕಳಾದ ಮಿರಯಾವಾದ್ರ ಮತ್ತು ರೆಹಾನ್ವಾದ್ರಾ ಭಾಗವಹಿಸಿದ್ದರು.ಸೋನಿಯಾ ಅವರುಮೆರವಣಿಗೆಯಲ್ಲಿ ಪಾಲ್ಗೊಂಡಿರಲಿಲ್ಲ.

ಮೆರವಣಿಗೆಯ ಸಂದರ್ಭದಲ್ಲಿರಸ್ತೆಯ ಇಕ್ಕೆಲದಲ್ಲಿ ಸಾಲುಗಟ್ಟಿ ನಿಂತಿದ್ದ ಜನರು ಕಾಂಗ್ರೆಸ್ ಪರ ಘೋಷಣೆಗಳನ್ನು ಕೂಗಿದರು. ಅಕ್ಕ ಪಕ್ಕದ ಮನೆಗಳವರು ಚಾವಣಿಗಳ ಮೇಲೆ ನಿಂತು ರಾಹುಲ್ ಮೇಲೆ ಹೂಮಳೆಗರೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.