ಲಖನೌ:ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಬುಧವಾರದಿಂದ ತೀರ್ಪು ಬರೆಯಲು ಆರಂಭಿಸಲಿದ್ದಾರೆ. ತಿಂಗಳಾಂತ್ಯಕ್ಕೆ ಪ್ರಕರಣದ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 32 ಆರೋಪಿಗಳ ಪರ ವಕೀಲರು ತಮ್ಮ ವಾದ ಮಂಡಿಸಿದ್ದು, ವಿಚಾರಣೆ ಪ್ರಕ್ರಿಯೆಯು ಮಂಗಳವಾರ ಪೂರ್ಣಗೊಂಡಿತು. ಬುಧವಾರದಿಂದ ತೀರ್ಪು ಬರೆಸುವಿಕೆ ಆರಂಭಿಸುವುದಾಗಿ ನ್ಯಾಯಾಧೀಶರಾದ ಎಸ್.ಕೆ.ಯಾದವ್ ತಿಳಿಸಿದರು. ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ನಾಯಕರಾದ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿದ್ದಾರೆ.

ತನಿಖಾ ಸಂಸ್ಥೆಯಾದ ಸಿಬಿಐ ಆರೋಪಿಗಳ ವಿರುದ್ಧ 350 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವನ್ನು ಗಮನದಲ್ಲಿರಿಸಿಕೊಂಡು, ತಿಂಗಳಾಂತ್ಯದ ಒಳಗೇ ಪ್ರಕರಣದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.