ಪುಣೆ: ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಕಾನೂನಿನ ಜೊತೆ ಸಂಘರ್ಷಕ್ಕೆ ಸಿಲುಕಿರುವ ಬಾಲಕನ ಪೋಷಕರನ್ನು ಸಾಕ್ಷ್ಯ ನಾಶಪಡಿಸಿದ ಪ್ರಕರಣದಲ್ಲಿ ಜೂನ್ 5 ರವರೆಗೆ ಪೊಲೀಸ್ ಕಸ್ಟಡಿಗೆ ಭಾನುವಾರ ಒಪ್ಪಿಸಲಾಗಿದೆ.

ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು. ಕಾರು ಚಾಲನೆ ಮಾಡುತ್ತಿದ್ದ ಬಾಲಕ, ಪಾನಮತ್ತನಾಗಿದ್ದ ಎಂದು ಆರೋಪಿಸಲಾಗಿದೆ.
.ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಬಂಧನ.
ಬಾಲಕನ ರಕ್ತದ ಮಾದರಿಯನ್ನು ಬದಲಿಸಿ ತನ್ನ ರಕ್ತದ ಮಾದರಿಯನ್ನು ಇರಿಸಿದ ಆರೋಪದಲ್ಲಿ, ಬಾಲಕನ ತಾಯಿ ಶಿವಾನಿ ಅಗರ್ವಾಲ್ ಅವರನ್ನು ಜೂನ್ 1 ರಂದು ಬಂಧಿಸಲಾಗಿದೆ. ಅಲ್ಲದೇ ಸಾಕ್ಷ್ಯ ನಾಶ ಹಾಗೂ ಅಪರಾಧದ ಹೊಣೆ ಹೊರುವಂತೆ ಕುಟುಂಬದ ಚಾಲಕನನ್ನು ಅಪಹರಿಸಿ, ಒತ್ತಡ ಹೇರಿದ ಆರೋಪದ ಮೇಲೆ ಬಾಲಕನ ತಂದೆ ಹಾಗೂ ಅಜ್ಜನನ್ನೂ ಬಂಧಿಸಲಾಗಿದೆ.
.ಪೋಶೆ ಕಾರು ಅಪಘಾತ ಪ್ರಕರಣ: ಬಾಲಕನ ತಂದೆ, ತಾತನ ಬಂಧನ ಅವಧಿ ವಿಸ್ತರಣೆ.
ಪ್ರಕರಣದಲ್ಲಿ ಬಂಧಿತರಾಗಿದ್ದ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಇಂದು ಇಬ್ಬರನ್ನು (ಬಾಲಕನ ಪೋಷಕರು) ಪೊಲೀಸರು ಪುಣೆ ನಗರದ ರಜಾ ಕಾಲದ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೂನ್ 5 ರವರೆಗೆ ಪೊಲೀಸ್ ಕಸ್ಟಡಿಗೆ ಕೋರಿದ್ದರು.

ಅಗರ್ವಾಲ್ ದಂಪತಿ ಸಂಚು ರೂಪಿಸಿ ಅಪಘಾತಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
.ಪೋಶೆ ಕಾರು ದುರಂತ | ಬಾಲಕನ ತಾಯಿಯ ರಕ್ತದ ಮಾದರಿ ಬಳಕೆ: ವೈದ್ಯರು ಸೇರಿ ಮೂವರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.