ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಸಮನ್ಸ್‌ ಜಾರಿ

Published : 5 ಅಕ್ಟೋಬರ್ 2024, 14:30 IST
Last Updated : 5 ಅಕ್ಟೋಬರ್ 2024, 14:30 IST
ಫಾಲೋ ಮಾಡಿ
Comments

ಪುಣೆ: ಹಿಂದುತ್ವ ಸಿದ್ಧಾಂತದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿ.ಡಿ. ಸಾವರ್ಕರ್ ಅವರ ಮೊಮ್ಮಗ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯವು ಅ.23ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಅವರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ. ಉತ್ತರ ನೀಡಲು ಅವರು ಖುದ್ದು ಹಾಜರಾಗಬೇಕಿದೆ ಎಂದು ಸಾತ್ಯಕಿ ಸಾವರ್ಕರ್ ಪರ ವಕೀಲ ಸಂಗ್ರಾಮ್ ಕೊಲ್ಹಟ್ಕರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಅವರು 2023ರ ಮಾರ್ಚ್‌ನಲ್ಲಿ, ಲಂಡನ್‌ನಲ್ಲಿ ಮಾಡಿದ ಭಾಷಣದಲ್ಲಿ, ವಿ.ಡಿ. ಸಾವರ್ಕರ್ ಅವರು ತಮ್ಮ ಐದಾರು ಸ್ನೇಹಿತರೊಂದಿಗೆ ಸೇರಿಕೊಂಡು ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಖುಷಿಪಟ್ಟಿದ್ದಾಗಿ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆಂದು ಹೇಳಿದ್ದಾರೆ. ಆದರೆ, ಅಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ವಿ.ಡಿ. ಸಾವರ್ಕರ್ ಅವರು ಎಲ್ಲಿಯೂ ಆ ರೀತಿ ಬರೆದಿಲ್ಲ. ರಾಹುಲ್‌ ಗಾಂಧಿಯವರ ಈ ಆರೋಪ ದುರುದ್ದೇಶಪೂರಿತವಾಗಿದೆ ಎಂದು ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ಕಳೆದ ವರ್ಷ ರಾಹುಲ್‌ ಗಾಂಧಿ ವಿರುದ್ಧ ಪುಣೆ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT