ಪುಣೆ: ರಾಷ್ಟ್ರಪಿತನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿ, ಮಹಾರಾಷ್ಟ್ರದ ಶ್ರೀ ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆಯ ಸಂಸ್ಥಾಪಕ ಸಂಭಾಜಿ ಭಿಡೆ ವಿರುದ್ಧ ಮಹಾತ್ಮ ಗಾಂಧೀಜಿಯ ಮರಿಮೊಮ್ಮಗ ತುಷಾರ್ ಗಾಂಧಿ ಗುರುವಾರ ಪುಣೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮರಾವತಿ ಜಿಲ್ಲೆಯಲ್ಲಿ ಜುಲೈ ಕೊನೆ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸಂಭಾಜಿ ಅವರು, ಮಹಾತ್ಮಗಾಂಧಿ ವಂಶಸ್ಥರ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈಗಾಗಲೇ ಅಮರಾವತಿ ಹಾಗೂ ನಾಸಿಕ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ.

ವಕೀಲರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಾಂಧಿ, ‘ಭಿಡೆ ಅವರು ಬಾಪು ವಿರುದ್ಧವಷ್ಟೇ ಹೇಳಿಕೆ ನೀಡಿಲ್ಲ. ಅವರ ಕುಟುಂಬದವರನ್ನೂ ನಿಂದಿಸಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದರು. ಆದರೆ ಇದೂವರೆಗೂ ಕ್ರಮ ಜರುಗಿಸಿಲ್ಲ’ ಎಂದು ದೂರಿದರು.

‘ತುಷಾರ್ ಗಾಂಧಿ ಅವರಿಂದ ದೂರು ಸ್ವೀಕರಿಸಿದ್ದೇವೆ. ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪುಣೆಯ ಡೆಕ್ಕನ್ ಜಿಮ್ಖಾನಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.