ಭಾನುವಾರ, 29 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೆಪ್ಟೊಸ್ಪೈರೋಸಿಸ್‌ನಿಂದ ಗುಣಮುಖ: ಪಂಜಾಬ್ ಸಿಎಂ ಮಾನ್ ಆಸ್ಪತ್ರೆಯಿಂದ ಬಿಡುಗಡೆ

Published : 29 ಸೆಪ್ಟೆಂಬರ್ 2024, 11:33 IST
Last Updated : 29 ಸೆಪ್ಟೆಂಬರ್ 2024, 11:33 IST
ಫಾಲೋ ಮಾಡಿ
Comments

ಚಂಡೀಗಢ: ಬ್ಯಾಕ್ಟೀರಿಯಾ ಸೋಂಕು ಲೆಪ್ಟೊಸ್ಪೈರೋಸಿಸ್‌ನಿಂದ ಚೇತರಿಸಿಕೊಂಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಇಂದು (ಭಾನುವಾರ) ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪಂಜಾಬ್ ವಿಧಾನಸಭಾ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್‌, ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ, ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್, ಕಾಂಗ್ರೆಸ್ ಶಾಸಕ ಪರ್ಗತ್ ಸಿಂಗ್ ಸೇರಿದಂತೆ ಅನೇಕರು ಆಸ್ಪತ್ರೆಗೆ ಭೇಟಿ ನೀಡಿ ಮಾನ್ ಅವರ ಆರೋಗ್ಯ ವಿಚಾರಿಸಿದ್ದರು.

ಆಸ್ಪತ್ರೆಯಿಂದ ಬಿಡುಗಡೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಮಾನ್ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಭತ್ತ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬ್ಯಾಕ್ಟೀರಿಯಾ ಸೋಂಕು ಲೆಪ್ಟೊಸ್ಪೈರೋಸಿಸ್‌ನಿಂದ ಬಳಲುತ್ತಿದ್ದ 50 ವರ್ಷದ ಮಾನ್ ಅವರನ್ನು ಬುಧವಾರ ತಡರಾತ್ರಿ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲೆಪ್ಟೊಸ್ಪೈರೋಸಿಸ್ ಒಂದು ಬ್ಯಾಕ್ಟೀರಿಯಾ ಸೋಂಕು ಆಗಿದ್ದು, ಇದು ಮನುಷ್ಯರು ಮತ್ತು ಪ್ರಾಣಿಗಳ ಮೇಲೆ ಪರಿಣಾಮ ಬೀರುತ್ತದೆ. ಸೋಂಕಿತ ಪ್ರಾಣಿಗಳು ಅಥವಾ ಕಲುಷಿತ ವಾತಾವರಣದಿಂದ ಮನುಷ್ಯರು ಸೋಂಕಿಗೆ ಒಳಗಾಗುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT