ಅಮೃತಸರ: ವ್ಯಕ್ತಿಯೊಬ್ಬನನ್ನು ಸಾಯುವವರೆಗೂ ಹೊಡೆದಿರುವ ಘಟನೆ ನಡೆದಿರುವ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಭಾನುವಾರ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದರು.

ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಶನಿವಾರ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲ್ಲಲಾಗಿದೆ. ಈ ಸಂಬಂಧ ತನಿಖೆಗೆ ಪಂಜಾಬ್ ಸರ್ಕಾರವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

'ಎಲ್ಲ ಧರ್ಮಗಳ ಧಾರ್ಮಿಕ ಕೇಂದ್ರಗಳನ್ನು ಗೌರವಿಸಬೇಕು ಮತ್ತು ರಕ್ಷಿಸಬೇಕು, ಕೋಮು ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ. ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಕೆಲವು ದುಷ್ಟರು ಇಂಥ ಕೆಲಸಗಳನ್ನು ಮಾಡುತ್ತಿರಬಹುದು. ಪೊಲೀಸರು ತನಿಖೆ ಕೈಗೊಂಡಿದ್ದಾರೆ... ' ಎಂದು ಮುಖ್ಯಮಂತ್ರಿ ಚನ್ನಿ ಹೇಳಿದರು.

ಸಿಖ್ ಧಾರ್ಮಿಕ ಧ್ವಜಕ್ಕೆ ಅಗೌರವ ತೋರಿದ ವ್ಯಕ್ತಿಯೊಬ್ಬನನ್ನು ಕೊಂದಿರುವ ಘಟನೆ ಭಾನುವಾರ ನಡೆದಿದೆ. ಕಪುರ್ತಲಾದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ–ಸ್ವರ್ಣ ಮಂದಿರ ಅಪವಿತ್ರಗೊಳಿಸಿದ ಆರೋಪ: ಉದ್ರಿಕ್ತ ಗುಂಪಿನಿಂದ ವ್ಯಕ್ತಿಯ ಕೊಲೆ

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಅಧಿಕಾರಿಗಳನ್ನು ಮುಖ್ಯಮಂತ್ರಿ ಚನ್ನಿ ಅವರು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಉಪ ಮುಖ್ಯಮಂತ್ರಿ ಸುಖ್‌ಜಿಂದರ್ ಸಿಂಗ್ ರಾಂಧಾವ ಅವರು ಅಮೃತಸರದಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.