ಚಂಡೀಗಢ: ವಿಶ್ವಾಸಮತ ಸಾಬೀತುಪಡಿಸಲು ಪಂಜಾಬ್ನ ಆಡಳಿತರೂಢ ಎಎಪಿ ಸರ್ಕಾರವು ಕರೆದಿದ್ದ ವಿಶೇಷ ಅಧಿವೇಶನಕ್ಕೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಬುಧವಾರ ಅನುಮತಿ ನಿರಾಕರಿಸಿದ್ದಾರೆ.

ಇದರೊಂದಿಗೆ ಪಂಜಾಬ್ನ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆ ಎದುರಾಗಿದೆ.

ವಿಶ್ವಾಸಮತ ಸಾಬೀತುಪಡಿಸಲು ಕರೆದಿರುವ ಅಧಿವೇಶನವು ನಿಯಮಾನುಸಾರವಲ್ಲ ಎಂದು ಉಲ್ಲೇಖಿಸಿರುವ ರಾಜಭವನವು, ವಿಶೇಷ ಅಧಿವೇಶನ ಆದೇಶವನ್ನು ರದ್ದುಗೊಳಿಸಿದೆ.

ಇದನ್ನೂ ಓದಿ:ದೆಹಲಿ ಆಯ್ತು, ಪಂಜಾಬ್ನಲ್ಲೂ ಬಹುಮತ ಸಾಬೀತುಪಡಿಸಲಿದೆ ಎಎಪಿ

ವಿರೋಧ ಪಕ್ಷದ ನಾಯಕ ಪರ್ತಪ್ ಸಿಂಗ್ ಬಾಜ್ವಾ, ಕಾಂಗ್ರೆಸ್ ನಾಯಕ ಸುಖ್ಪಾಲ್ ಸಿಂಗ್ ಖೈರಾ, ಪಂಜಾಬ್ ಬಿಜೆಪಿ ಅಧ್ಯಕ್ಷ ಅಶ್ವನಿ ಶರ್ಮಾ, ಆಡಳಿತಾರೂಢ ಎಎಪಿ ಪಕ್ಷ ಪರವಾಗಿ ಕರೆದಿರುವ ವಿಶೇಷ ಅಧಿವೇಶನಕ್ಕೆ ಅನುಮತಿ ನಿರಾಕರಿಸುವಂತೆ ರಾಜ್ಯಪಾಲರನ್ನು ಕೋರಿದ್ದರು.

ಬಿಜೆಪಿಯು ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ವಿಶ್ವಾಸಮತ ಸಾಬೀತುಪಡಿಸಲು ಸೆಪ್ಟೆಂಬರ್ 22ರಂದು ವಿಶೇಷ ವಿಧಾನಸಭಾ ಅಧಿವೇಶನ ಕರೆದಿದ್ದರು.

ಎಎಪಿ ಶಾಸಕರಿಗೆ ಬಿಜೆಪಿ ₹25 ಕೋಟಿ ಆಮಿಷವೊಡ್ಡಿ ತನ್ನತ್ತ ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.