ಚಂಡೀಗಢ: ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ, ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ವಿರುದ್ಧ ದಾಖಲಾಗಿರುವ ಧರ್ಮಗ್ರಂಥಕ್ಕೆ ಅಪಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಲು ಪಂಜಾಬ್ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆಸಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸೋಮವಾರ ಸಂಜೆ ವಿಚಾರಣೆಗೆ ಅನುಮತಿ ನೀಡಿದರು ಎಂದು ತಿಳಿಸಿವೆ.

2015ರಲ್ಲಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹಾಗೂ ಬೆಂಬಲಿಗರು ಸಿಖ್ ಸಮುದಾಯದ ಪವಿತ್ರ ಧರ್ಮಗ್ರಂಥ ‘ಗುರುಗ್ರಂಥ ಸಾಹಿಬ್’ಗೆ ಅಪಚಾರ ಎಸಗಿದ್ದರು. ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಹಿಂಸಾಚಾರ ಭಗುಲೆದ್ದಿತ್ತು. ನಂತರ ನಡೆದ ಬೆಳವಣಿಗೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಈ ಸಂಬಂಧ ಮೂರು ಪ್ರಕರಣಗಳು ದಾಖಲಾಗಿದ್ದವು. ನಂತರ ಈ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.