ಪಟಿಯಾಲ: ಪಂಜಾಬ್‌ನ ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ವಿಡಿಯೊವೊಂದನ್ನು ಟ್ವೀಟಿಸಿದೆ.

ಈ ವಿಡಿಯೊದಲ್ಲಿ ಎರಡು ಗುಂಪುಗಳು ಹೊಡೆದಾಟದಲ್ಲಿ ತೊಡಗಿರುವುದು ಕಂಡುಬಂದಿದೆ.

ಕಟ್ಟಡವೊಂದರ ಟೆರೇಸ್‌ನಿಂದ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಘರ್ಷಣೆಯ ಸಂದರ್ಭದಲ್ಲಿ ಕೆಲವರು ಕತ್ತಿಗಳು ಮತ್ತು ಇತರ ಆಯುಧಗಳನ್ನು ಹಿಡಿದಿದ್ದಾರೆ.

ಶಿವಸೇನಾ ನಡೆಸುತ್ತಿದ್ದ ಮೆರವಣಿಗೆ ಮೇಲೆ ಗುಂಪೊಂದು ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

'ಘಟನೆ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ನಾವು ಶಿವಸೇನಾ ಸ್ಥಳೀಯ ಘಟಕದ ಮುಖ್ಯಸ್ಥ ಹರೀಶ್ ಸಿಂಗ್ಲಾ ಅವರೊಂದಿಗೆ ಮಾತನಾಡುತ್ತಿದ್ದೇವೆ. ಏಕೆಂದರೆ ಅವರು ಮೆರವಣಿಗೆಗೆ ಯಾವುದೇ ಅನುಮತಿಯನ್ನು ಪಡೆದಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.