ಖರರ್ (ಪಂಜಾಬ್): ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರುಇಲ್ಲಿನ ಶ್ರೀ ಕಟಲ್‌ಗಡ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಅವರು, ತಮ್ಮ ಸರ್ಕಾರವು ಅತ್ಯಂತ ಸಣ್ಣ ಅವಧಿಯಲ್ಲಿ, ಜನರ ಕಲ್ಯಾಣಕ್ಕಾಗಿ ಹೆಚ್ಚಿನ ಕೆಲಸಗಳನ್ನು ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪಂಜಾಬ್ ಹಾಗೂ ಎಲ್ಲರಿಗೂ ಒಳಿತಾಗಲೆಂದು ಪ್ರಾರ್ಥಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಪ್ರಚಾರದ ಸಂದರ್ಭದಲ್ಲಿ ಪಕ್ಷದ ನಾಯಕತ್ವ ನನ್ನದಾಗಿತ್ತು. ಈಗ ಅದು ಜನರ ಇಚ್ಛೆಯಾಗಿದೆ. ನಾವು ನಮ್ಮಿಂದ ಸಾಧ್ಯವಾದ ಪ್ರಯತ್ನ ಮಾಡಿದ್ದೇವೆ' ಎಂದು ಹೇಳಿದ್ದಾರೆ.

ಚನ್ನಿ ಅವರು ಚಮ್‌ಕೌರ್ ಸಾಹಿಬ್ ಹಾಗೂ ಭದೌರ್ ವಿಧಾನಸಭೆ ಕ್ಷೇತ್ರಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

117ಸದಸ್ಯ ಬಲದಪಂಜಾಬ್ ವಿಧಾನಸಭೆಗೆ ಇಂದು (ಫೆ.20)ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.2.14 ಕೋಟಿ ಮತದಾರು, ಕಣದಲ್ಲಿರುವ1,304 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.