ನವದೆಹಲಿ: ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಮರಣ ದಂಡನೆ ವಿಧಿಸಿರುವುದರ ವಿರುದ್ಧ ಭಾರತ ಸಲ್ಲಿಸಿರುವ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ವಿಚಾರಣೆಗೆ ಸ್ವೀಕರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತ ಸರ್ಕಾರ ಗುರುವಾರ ಅರ್ಜಿ ಸಲ್ಲಿಸಿದ್ದು, ಕತಾರ್ ನ್ಯಾಯಾಲಯವು ಶೀಘ್ರವೇ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ ಎಂದೂ ವರದಿಗಳು ಹೇಳಿವೆ.

ಆದರೆ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಕತಾರ್‌ನ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಭಾರತೀಯ ನೌಕಾಪಡೆಯ 8 ಜನ ಮಾಜಿ ಅಧಿಕಾರಿಗಳಿಗೆ ಪ್ರಕರಣವೊಂದರಲ್ಲಿ ಕತಾರ್‌ನ ನ್ಯಾಯಾಲಯ ಅಕ್ಟೋಬರ್ 26ರಂದು ಮರಣ ದಂಡನೆ ವಿಧಿಸಿತ್ತು. ಈ ತೀರ್ಪಿಗೆ ಆಘಾತ ವ್ಯಕ್ತಪಡಿಸಿದ್ದ ಭಾರತ, ಎಂಟು ಜನರ ಭಾರತೀಯರನ್ನು ಶಿಕ್ಷೆಯಿಂದ ಪಾರು ಮಾಡಲು ಕಾನೂನಿನಡಿ ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿತ್ತು.

‘ಕತಾರ್‌ನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಎಂಟು ಜನ ಮಾಜಿ ಅಧಿಕಾರಿಗಳಿಗೆ ಕಾನೂನು ಹಾಗೂ ಕಾನ್ಸುಲರ್ ಕಚೇರಿಯ ನೆರವು ನೀಡಲಾಗುವುದು’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.