ಪಟ್ನಾ: ಬಿಹಾರ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪತ್ನಿಯಾದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಹಿರಿಯ ಮುಖಂಡ ಅಬ್ದುಲ್ ಬಾರಿ ಸಿದ್ದಿಕಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೈಯದ್ ಫೈಸಲ್ ಅಲಿ ಹಾಗೂ ಪಕ್ಷದ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಊರ್ಮಿಳಾ ಠಾಕೂರ್ ಅವರು ಆರ್ಜೆಡಿ ಪಕ್ಷದ ಇತರೆ ಅಭ್ಯರ್ಥಿಗಳಾಗಿದ್ದಾರೆ. ಅಲ್ಲದೆ, ಸಿಪಿಐ(ಎಂಎಲ್) ಅಭ್ಯರ್ಥಿ ಶಶಿ ಯಾದವ್ ಅವರನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿದೆ ಎಂದು ಆರ್ಜೆಡಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಎಲ್ಲ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.