ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ನರೇಂದ್ರ ಮೋದಿ ನೇತೃತ್ವದ ಹಿಂದಿನ ಸರ್ಕಾರದಿಂದ ಯಾವುದೇ ಲೋಪ ಆಗಿಲ್ಲ ಎಂದು ಮಹಾಲೇಖಪಾಲರು (ಸಿಎಜಿ) ವರದಿ ನೀಡಿದ್ದರು. ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು (ಪಿಎಸಿ) ಇದನ್ನು ಪರಿಶೀಲನೆಗೆ ಒಳಪಡಿಸಲಿದೆ.

ಭಾರತದ ವಾಯುಪಡೆಯ ಕಾರ್ಯಾಚರಣೆ ಸನ್ನದ್ಧತೆಯೂ ಪರಿಶೀಲನೆಗೆ ಒಳಪಡಲಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಅವರು ಪಿಎಸಿಯ ಅಧ್ಯಕ್ಷ.

ರಕ್ಷಣೆಯಿಂದ ಹಿಡಿದು ಕೃಷಿವರೆಗೆ ಸಿಎಜಿ ನೀಡಿರುವ ಹಲವು ವರದಿಗಳನ್ನು ಪರಿಶೀಲನೆಗೆ ಒಳಪಡಿಸಲು ಪಿಎಸಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರಿ ಚರ್ಚೆಗೆ ಒಳಗಾಗಿತ್ತು. ಈ ವಿಚಾರವನ್ನೂ ಪರಿಶೀಲನೆ ನಡೆಸಲು ಸಮಿತಿಯು ನಿರ್ಧರಿಸಿದೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಯ ಸಮರ್ಪಕವಾಗಿಲ್ಲ ಎಂದು ಟೀಕೆಗಳು ಕೇಳಿ ಬಂದಿದ್ದವು. ಜಿಎಸ್ಟಿ ಜಾರಿಯನ್ನೂ ಪರಿಶೀಲಿಸಲು ಸಿಎಜಿ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.