ಅಹಮದಾಬಾದ್:ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಳ್ಳು ಮತ್ತು ಅವಹೇಳನಕಾರಿ ಲೇಖನ ಪ್ರಕಟಿಸಲಾಗಿದೆ ಎಂದು ಆರೋಪಿಸಿ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆ ವಿರುದ್ಧ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಸಮೂಹದ ಕಂಪನಿಗಳು ₹5ಸಾವಿರ ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿವೆ.

ರಿಲಯನ್ಸ್ ಡಿಫೆನ್ಸ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಮತ್ತು ರಿಲಯನ್ಸ್ ಏರೋಸ್ಟ್ರಕ್ಚರ್ ಈ ಮೊಕದ್ದಮೆ ಹೂಡಿವೆ.

‘ನ್ಯಾಷನಲ್ ಹೆರಾಲ್ಡ್’ ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಮತ್ತು ಅದರ ಪ್ರಭಾರ ಸಂಪಾದಕ ಜಾಫರ್ ಆಘಾ ಹಾಗೂ ಲೇಖನ ಬರೆದಿರುವ ವಿಶ್ವದೀಪಕ್ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಸೆಪ್ಟೆಂಬರ್ 7ರ ಒಳಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

‘ನ್ಯಾಷನಲ್ ಹೆರಾಲ್ಡ್’ನಲ್ಲಿ ಪ್ರಕಟವಾಗಿರುವ ‘ಮೋದಿ ಅವರು ರಫೇಲ್ ಒಪ್ಪಂದ ಘೋಷಿಸುವ ಕೇವಲ 10 ದಿನಗಳ ಮುನ್ನ ಅನಿಲ್ ಅಂಬಾನಿ ರಿಲಯನ್ಸ್ ಡಿಫೆನ್ಸ್ ಕಂಪನಿ ಆರಂಭಿಸಿದರು’ ಎನ್ನುವ ಲೇಖನ ಸಾರ್ವಜನಿಕರನ್ನು ದಾರಿತಪ್ಪಿಸುವುದಾಗಿದೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.