ನವದೆಹಲಿ:ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರು ನೇಮಕವಾಗಲಿದ್ದಾರೆ ಎಂಬ ಚರ್ಚೆ ತೀವ್ರವಾಗಿದೆ. ದಲಿತ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅಥವಾ ಸುಶೀಲ್ ಕುಮಾರ್ ಶಿಂಧೆ ಅವರ ಹೆಸರು ಪರಿಶೀಲನೆಯಲ್ಲಿದೆ ಎನ್ನುವ ಸುದ್ದಿ ದಟ್ಟವಾಗಿವೆ.

ನೆಹರೂ–ಗಾಂಧಿ ಕುಟುಂಬದ ಹೊರಗಿನ ಇಬ್ಬರುಈ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಪಿ.ವಿ. ನರಸಿಂಹ ರಾವ್ ಮತ್ತು ಸೀತಾರಾಂ ಕೇಸರಿ ಅವರು ಅಧ್ಯಕ್ಷರಾಗಿದ್ದರು.

ಶಿಂಧೆ ಅವರ ಆಯ್ಕೆಯ ಸಾಧ್ಯತೆಯೇ ಹೆಚ್ಚು ಎಂದು ಹೇಳಲಾಗುತ್ತಿದೆ. ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದವರು. ಈ ವರ್ಷ ಆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇದೆ. ಪಕ್ಷದ ಪ್ರಮುಖ ದಲಿತ ನಾಯಕರಲ್ಲಿ ಶಿಂಧೆ ಅವರೂ ಒಬ್ಬರು. ಗಾಂಧಿ ಕುಟುಂಬಕ್ಕೆ ಅವರ ಮೇಲೆ ಪೂರ್ಣ ವಿಶ್ವಾಸವೂ ಇದೆ. ಇದು ಅವರ ಪರವಾಗಿರುವ ಅಂಶಗಳು.

ಖರ್ಗೆ ಅವರೂ ದೀರ್ಘಕಾಲದಿಂದ ಗಾಂಧಿ ಕುಟುಂಬಕ್ಕೆ ನಿಷ್ಠೆ ತೋರಿದವರು. ಹಿಂದಿನ ಲೋಕಸಭೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಮೂಲಕ ದಲಿತ ಸಮುದಾಯದ ವಿಶ್ವಾಸ ಗಳಿಸುವ ಯತ್ನವನ್ನು ಕಾಂಗ್ರೆಸ್ ಮಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕೆಳಕ್ಕಿಳಿದ ರಾಹುಲ್

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯಿಂದ ಬುಧವಾರ ಅಧಿಕೃತವಾಗಿ ಕೆಳಗಿಳಿದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಹೊಣೆ ಹೊತ್ತು ಅವರು ಮೇ 25ರಂದೇ ರಾಜೀನಾಮೆ ನೀಡಿದ್ದರು. ಪಕ್ಷದ ಸಂಘಟನೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.