ನವದೆಹಲಿ: ಐದು ರಾಜ್ಯಗಳ ಚುನಾವಣೆಗಳಲ್ಲಿ ಇಂದು ಪ್ರಕಟವಾದ ನಾಲ್ಕು ರಾಜ್ಯಗಳ ಚುನಾವಣೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.

ಮೈಕ್ರೊ ಬ್ಲಾಗಿಂಗ್ ವೇದಿಕೆ ಎಕ್ಸ್ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, ‘ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯಗಳ ಚುನಾವಣೆಯಲ್ಲಿ ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ’ ಎಂದಿದ್ದಾರೆ.

‘ಅದರ ಜತೆಯಲ್ಲೇ ನಾವು ನಡೆಸುತ್ತಿರುವ ಸೈದ್ಧಾಂತಿಕ ಹೋರಾಟವು ಮುಂದುವರಿಯಲಿದೆ. ತೆಲಂಗಾಣದ ಜತೆಗೆ ಧನ್ಯವಾದಗಳು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆಯಲ್ಲಿ ಅದ್ಭುತವಾಗಿ ಕೆಲಸ ಮಾಡಿ ಪಕ್ಷವನ್ನು ಬೆಂಬಲಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು’ ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿ ಬಹುಮತದತ್ತ ಸಾಗುತ್ತಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಪರಾಭವಗೊಂಡಿದೆ, ಛತ್ತಿಸಗಢದಲ್ಲೂ ಕಾಂಗ್ರೆಸ್ನ ನಿರೀಕ್ಷೆ ಹುಸಿಯಾಗಿದೆ. ತೆಲಂಗಾಣದಲ್ಲಿ ಬಿಆರ್ಎಸ್ನ ಕೋಟೆಗೆ ಕಾಂಗ್ರೆಸ್ ಲಗ್ಗೆ ಇಟ್ಟಿದೆ. ಮತ್ತೊಂದೆಡೆ ಬಿಜೆಪಿ ಒಂದಂಕಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.
.ಎರಡರಲ್ಲಿ ಗೆದ್ದು ಒಂದರಲ್ಲಿ ಅಧಿಕಾರ ಉಳಿಸಿಕೊಂಡ ಕಮಲ; BRS ಕೋಟೆ ಭೇದಿಸಿದ ಕೈ.Election Results: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ- ಪ್ರಧಾನಿ ಮೋದಿ ಭಾಷಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.