ಚೆನ್ನೈ: ತಮಿಳುನಾಡಿನ ಊಟಿ ಸಮೀಪದ ಮುತ್ತುನಾಡು ಗ್ರಾಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಸಮುದಾಯದವರೊಂದಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ರಾಹುಲ್ ಗಾಂಧಿ ಅವರು ತಮಿಳುನಾಡು ಮತ್ತು ಕೇರಳಕ್ಕೆ ಇಂದಿನಿಂದ ಎರಡು ದಿನಗಳ ಭೇಟಿ ಹಮ್ಮಿಕೊಂಡಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ರಾಹುಲ್ ಗಾಂಧಿ ಕೊಯಮತ್ತೂರಿಗೆ ಆಗಮಿಸಿದರು. ಬಳಿಕ ಸ್ವಕ್ಷೇತ್ರವಾದ ಕೇರಳದ ವಯನಾಡ್ಗೆ ಭೇಟಿ ನೀಡಿದರು. ಮಾರ್ಗ ಮಧ್ಯೆ ತೋಡಾ ಬುಡಕಟ್ಟು ಸಮುದಾಯದವರ ಉಡುಪು ಧರಿಸಿ ಅವರೊಂದಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಮೈಕ್ರೋಬ್ಲಾಗಿಂಗ್ ತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.

‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದ 2019ರ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಅವರು ತಪ್ಪಿತಸ್ಥ ಎಂದು ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಹಾಗಾಗಿ, ಲೋಕಸಭಾ ಕಾರ್ಯಾಲಯವು ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದ್ದು, ಕಲಾಪದಲ್ಲಿಯೂ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.