ಠಾಣೆ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ 'ಸಂವಿಧಾನದ ಎಬಿಸಿ' ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು (ಶುಕ್ರವಾರ) ಆರೋಪಿಸಿದ್ದಾರೆ.

'ಸಂವಿಧಾನವು ಧಾರ್ಮಿಕ ಆಧಾರದಲ್ಲಿ ಮೀಸಲಾತಿಯನ್ನು ಅನುಮತಿಸುವುದಿಲ್ಲ ಎಂಬುದು ರಾಹುಲ್ ಗಾಂಧಿಗೆ ತಿಳಿದಿಲ್ಲ. ಸಂವಿಧಾನದ ಎಬಿಸಿಯನ್ನು ಅರ್ಥಮಾಡಿಕೊಂಡಿಲ್ಲ. ಅವರು ಪ್ರೀತಿಯ ಅಂಗಡಿಯಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ' ಎಂದು ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ಪ್ರತಿ ಹಿಡಿದುಕೊಂಡು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನಡ್ಡಾ, 'ತುಷ್ಟೀಕರಣ ರಾಜಕಾರಣ ಮತ್ತು ವೋಟ್ ಬ್ಯಾಂಕ್ ರಾಜಕಾರಣವನ್ನು ತಡೆಯಬೇಕು. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾಗಳನ್ನು ತೆಗೆದು ಹಾಕಿ ಅಲ್ಪಸಂಖ್ಯಾತರಿಗೆ ನೀಡಲು ಕಾಂಗ್ರೆಸ್ ಬಯಸುತ್ತದೆ' ಎಂದು ಅವರು ಆರೋಪಿಸಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಎಂದಿಗೂ ತಾರತಮ್ಯ ನೀತಿ ತೋರಿಲ್ಲ. ಕಳೆದೊಂದು ದಶಕದಲ್ಲಿ ಅಭಿವೃದ್ಧಿ ಕಾಮಗಾರಿಯು ವೇಗವನ್ನು ಪಡೆದುಕೊಂಡಿದೆ' ಎಂದು ಅವರು ಹೇಳಿದ್ದಾರೆ.
.ಜೀವನದಲ್ಲಿ ಪ್ರಧಾನಿ ಮೋದಿ ಸಂವಿಧಾನವನ್ನು ಎಂದಿಗೂ ಓದಿಲ್ಲ: ರಾಹುಲ್ ಗಾಂಧಿ.ಬಿಲಿಯನೇರ್ಗಳ ಹಿತಾಸಕ್ತಿ ಪೂರೈಸಲು ಬಡವರ ಹಣ ವ್ಯಯಿಸುತ್ತಿರುವ PM ಮೋದಿ: ರಾಹುಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.