ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಏಕೈಕ ಅರ್ಹ ವ್ಯಕ್ತಿ ಎಂದು ಪಕ್ಷದ ನಾಯಕ ಸಲ್ಮಾನ್ ಖುರ್ಷಿದ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಖುರ್ಷಿದ್ ಈ ಹೇಳಿಕೆ ನೀಡಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ಮರಳಿ ಒಪ್ಪಿಕೊಳ್ಳುವಂತೆ ರಾಹುಲ್ ಗಾಂಧಿ ಅವರನ್ನು ಮನವೊಲಿಸಲು ಯತ್ನಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ಅಕ್ಟೋಬರ್ 17ಕ್ಕೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆ

‘ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೂಕ್ತ ಎಂಬುದು ನಿಜ. ಅದರಾಚೆಗೆ ನಾವು ಏನೂ ಚರ್ಚಿಸಿಲ್ಲ. ಅವರು ನಮ್ಮ ಮನವಿಯನ್ನು ಸ್ವೀಕರಿಸುತ್ತಾರೋ ಇಲ್ಲವೋ ಗೊತ್ತಿಲ್ಲ’ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ (ಸಿಡಬ್ಲ್ಯುಸಿ) ಬಳಿಕ ಖುರ್ಷಿದ್ ಹೇಳಿದ್ದಾರೆ

‘ರಾಹುಲ್ ಗಾಂಧಿಯವರು ಪಕ್ಷದ ನೇತೃತ್ವ ವಹಿಸಿಕೊಳ್ಳಬೇಕು. ಅಧ್ಯಕ್ಷರಾಗಬೇಕು ಎಂಬುದು ಎಲ್ಲ ಕಾರ್ಯಕರ್ತರಂತೆ ನನ್ನ ಅಭಿಪ್ರಾಯವೂ ಆಗಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಸಹ ಸಭೆಯ ಬಳಿಕ ಹೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ಕ್ಕೆ ಚುನಾವಣೆ ನಿಗದಿಯಾಗಿದ್ದು,19ಕ್ಕೆ ಮತ ಎಣಿಕೆ ನಡೆಯಲಿದೆ.

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಬೇಕು: ಮಲ್ಲಿಕಾರ್ಜುನ ಖರ್ಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.