ನವದೆಹಲಿ: ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರದ ಬದಿಯಲ್ಲಿ ಚೀನಾ ಸೇತುವೆ ನಿರ್ಮಿಸುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಶ್ನಿಸಿದ್ದಾರೆ.

‘ಕಿವುಡನ ಹಾಗೆ ಪ್ರಧಾನಿ ಮೌನವಾಗಿರುವುದು ಸರಿಯಲ್ಲ. ನಮ್ಮ ಭೂಮಿ, ಗಡಿಗಳ ವಾಸ್ತವ ಸ್ಥಿತಿಯ ಬಗ್ಗೆ ಜನರಿಗೆ ಗೊತ್ತಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಲಡಾಖ್‌ನವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಬಳಿ ಕಳೆದ ಎರಡು ತಿಂಗಳಿನಿಂದ ಚೀನಾ ಸೇತುವೆ ನಿರ್ಮಿಸುತ್ತಿದೆ ಎಂದು ಹೇಳುವ ಮಾದ್ಯಮ ವರದಿಯೊಂದನ್ನು ಹಂಚಿಕೊಂಡಿದ್ದಾರೆ.

ಈ ಸೇತುವೆಯು ಸರೋವರದ ದಕ್ಷಿಣ ಮತ್ತು ಉತ್ತರ ದಡಗಳ ನಡುವೆ ಸಂಪರ್ಕ ಕಲ್ಪಿಸಲಿದೆ ಎಂದು ವರದಿ ಹೇಳಿದೆ.

‘ಪ್ರಧಾನಿ ವಿವರಿಸಬೇಕು’(ಕೊಯಮತ್ತೂರು ವರದಿ):ಭಾರತ-ಚೀನಾ ಗಡಿಯಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿವರಿಸಬೇಕು. ಜತೆಗೆ, ಗಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉಭಯ ರಾಷ್ಟ್ರಗಳು ಮಾತುಕತೆ ಮುಂದುವರಿಸಬೇಕು ಎಂದು ಸಿಪಿಐನ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರು ಹೇಳಿದ್ದಾರೆ.

ಪಾಂಗಾಂಗ್ ಸರೋವರದ ಬದಿಯಲ್ಲಿ ಚೀನಾದಿಂದ ಸೇತುವೆ ನಿರ್ಮಾಣದ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅವರು,‘ ಗಡಿ ಸಮಸ್ಯೆಗೆ ಎರಡೂ ದೇಶಗಳು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಮೋದಿ ಈ ಬಗ್ಗೆ ಏನೂ ಮಾತನಾಡುತ್ತಿಲ್ಲ. ಗಡಿ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುವುದು ಅವರ ಕರ್ತವ್ಯವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.