ನವದೆಹಲಿ: ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟ ನೋಡಿ ತುಂಬಾ ನೋವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಉಕ್ರೇನ್‌ನ ಪೋಲೆಂಡ್ ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಅಲ್ಲಿನ ಯೋಧರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೊ ತುಣುಕನ್ನು ಹಂಚಿಕೊಂಡಿರುವ ಅವರು, ಬೇಸರ ವ್ಯಕ್ತಪಡಿಸಿದ್ದಾರೆ.

‘ಭಾರತೀಯ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಹಿಂಸೆ, ಅದಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಅವರ ಪೋಷಕರು ನೋಡಬೇಕಾದ ಸ್ಥಿತಿ ಬಂದಿರುವುದನ್ನು ನೋಡಿ ತುಂಬಾ ನೋವಾಗಿದೆ. ಯಾವ ಪೋಷಕರಿಗೂ ಇಂಥ ಸ್ಥಿತಿ ಬರಬಾರದು. ಸ್ಥಳಾಂತರ ಯೋಜನೆಯ ವಿಸ್ತೃತ ಮಾಹಿತಿಯನ್ನು ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಜತೆ ಹಂಚಿಕೊಳ್ಳಬೇಕು. ನಾವು ನಮ್ಮದೇ ಜನರನ್ನು ಕೈಬಿಡಲಾಗದು’ ಎಂದು ಟ್ವೀಟ್‌ನಲ್ಲಿ ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪೋಲೆಂಡ್ ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಥಳಿಸಿದ ಉಕ್ರೇನ್ ಯೋಧರು

ಇದನ್ನೂ ಓದಿ:ಕಣ್ಣೆದುರೇ ಸಾವಿನ ಭೀಕರತೆ ಕಂಡೆ: ಉಕ್ರೇನ್ನಿಂದ ರಾಜ್ಯದ ವಿದ್ಯಾರ್ಥಿನಿ ಭಯದ ಮಾತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.