ನವದೆಹಲಿ: ಎಎಪಿ ಮಾ.31ರಂದು ಆಯೋಜಿಸಿರುವ ‘ಮಹಾರ್ಯಾಲಿ’ಯಲ್ಲಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್ ಮತ್ತು ತೇಜಸ್ವಿ ಯಾದವ್ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಗೋಪಾಲ್ ರಾಯ್ ತಿಳಿಸಿದರು.

ಡೆರೆಕ್ ಒಬ್ರಾಯನ್, ತ್ರಿಚಿ ಶಿವ, ಫಾರೂಕ್ ಅಬ್ದುಲ್ಲಾ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಸೊರೇನ್ ಸಹ ಭಾಗಿಯಾಗಲಿದ್ದಾರೆ ಎಂದರು.

ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ರಾಮಲೀಲಾ ಮೈದಾನದಲ್ಲಿ ರ್ಯಾಲಿ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯಲಾಗಿದೆ. ಕಾರ್ಯಕ್ರಮದಲ್ಲಿ 20,000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.