ನವದೆಹಲಿ: ‘ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಯಲ್ಲಿ ನಾನು ಯಾವುದೇ ಪಾತ್ರ ವಹಿಸುವುದಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಅಧ್ಯಕ್ಷ ಸ್ಥಾನದಿಂದ ಹೊರನಡೆಯುವ ನಿರ್ಧಾರ ಅಚಲ ಎಂಬ ಸಂದೇಶವನ್ನೂ ಮುಖಂಡರಿಗೆ ರವಾನಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ತೀರ್ಮಾನವನ್ನು ಅವರು ಪ್ರಕಟಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯು ಇದನ್ನು ತಿರಸ್ಕರಿಸಿತ್ತು. ರಾಹುಲ್ ಅವರೇ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಪಕ್ಷದ ವಿವಿಧ ಮುಖಂಡರು ಆಗ್ರಹಪಡಿಸಿದ್ದರು. ‘ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಉತ್ತರಾಧಿಕಾರಿ ಯಾರು’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಉತ್ತರಾಧಿಕಾರಿ ಯಾರು ಎಂಬುದನ್ನು ನಾನು ನಿರ್ಧರಿಸುವುದಿಲ್ಲ. ಪಕ್ಷ ನಿರ್ಧರಿಸುತ್ತದೆ’ ಎಂದು ರಾಹುಲ್ ಪ್ರತಿಕ್ರಿಯಿಸಿದರು.

ರಫೇಲ್– ನಿಲುವು ಸ್ಪಷ್ಟ: ರಫೇಲ್ ಯುದ್ಧವಿಮಾನ ಖರೀದಿ ಪ್ರಕ್ರಿಯೆಯಲ್ಲಿ ‘ಕಳ್ಳತನ’ ನಡೆದಿದೆ ಎಂಬುದನ್ನು ಅವರು ಪುನರುಚ್ಚರಿಸಿದರು.

ರಾಷ್ಟ್ರಪತಿ ಭಾಷಣದಲ್ಲಿ ರಫೇಲ್ ವಹಿವಾಟು ಉಲ್ಲೇಖಿಸಿರುವುದನ್ನು ಕುರಿತ ಪ್ರಶ್ನೆಗೆ ಅವರು, ‘ವಹಿವಾಟಿನಲ್ಲಿ ಕಳ್ಳತನ ನಡೆದಿದೆ ಎಂಬುದು ನನ್ನ ಪ್ರತಿಪಾದನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.