ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರುಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿವಿದೇಶ ಪ್ರವಾಸ ಕೈಗೊಂಡಿರುವುದನ್ನು ಬಿಜೆಪಿ ವ್ಯಂಗ್ಯ ಮಾಡಿದೆ.

ಲೋಕಸಭಾ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದ ರಾಹುಲ್, ಬ್ಯಾಂಕಾಕ್ಗೆ ತೆರಳಿದ್ದು ಅಲ್ಲಿಂದ ಕಾಂಬೋಡಿಯಾದ ಅಧ್ಯಾತ್ಮ ಕೇಂದ್ರದಲ್ಲಿವಿಪಶ್ಶನ ಧ್ಯಾನ ಮಾಡಲಿದ್ದಾರೆ. ಆ ಬಳಿಕ ಚುನಾವಣಾ ಪ್ರಚಾರಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ತಾರಾ ಪ್ರಚಾರಕನ ಭಾಷಣ ಕೇಳಲು ಮತದಾರರು ಕಾತುರದಿಂದ ಕಾಯುತ್ತಿದ್ದಾರೆ. ಅವರು ವಿದೇಶಕ್ಕೆ ತೆರಳಿರುವುದು ನಿಜವೇ?‘ ಎಂದು ಕರ್ನಾಟಕದ ಬಿಜೆಪಿ ಘಟಕ ಟ್ವೀಟ್ನಲ್ಲಿ ಲೇವಡಿ ಮಾಡಿದೆ.

‘ಸಾರ್ವಜನಿಕ ಹಾಗೂ ಖಾಸಗಿ ಬದುಕನ್ನು ಮಿಶ್ರಣ ಮಾಡುವುದು ಸರಿಯಲ್ಲ. ಪ್ರತಿಯೊಬ್ಬರ ಖಾಸಗಿ ಜೀವನವನ್ನು ಗೌರವಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಬಿಜೆಪಿಗೆ ಸಲಹೆ ನೀಡಿದ್ದಾರೆ.

‘ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡುವುದು ಕೆಲವು ಮಾಧ್ಯಮಗಳಿಗೆ ಅದ್ಭುತ ವಿಷಯ ಎನಿಸಿದರೆ, ವ್ಯಕ್ತಿಯೊಬ್ಬರು ಖಾಸಗಿಯಾಗಿ ‘ಅಧ್ಯಾತ್ಮ ಪ್ರವಾಸ’ಕ್ಕೆ ತೆರಳುವುದು ಅಪರಾಧವಾಗಿ ತೋರುತ್ತದೆ’ ಎಂದು ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯಿ ಅವರು ಮಾಧ್ಯಮಗಳ ಪಕ್ಷಪಾತ ಧೋರಣೆಯನ್ನು ಖಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.