ನವದೆಹಲಿ: ‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಮತ್ತು ಅವರ ಮಕ್ಕಳಾದ ಮೀಸಾ ಭಾರತಿ, ಹೇಮಾ ಯಾದವ್ ಅವರಿಗೆ ದೆಹಲಿ ನ್ಯಾಯಾಲಯವು ಇದೇ 28ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇವರ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯಿಸಲು ಸಮಯಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕೋರಿದ್ದರಿಂದ, ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಮೂವರಿಗೆ ಶುಕ್ರವಾರ ಮಧ್ಯಂತರ ಜಾಮೀನು ನೀಡಿದರು. ನ್ಯಾಯಾಲಯದ ಸಮನ್ಸ್ಗೆ ಅನುಗುಣವಾಗಿ ಆರೋಪಿಗಳು ಕೋರ್ಟ್ಗೆ ಹಾಜರಾಗಿದ್ದರು.

2004ರಿಂದ 2009ರ ಅವಧಿಯಲ್ಲಿ ಲಾಲು ಪ್ರಸಾದ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದರು. ಈ ವೇಳೆ ಲಾಲು ಕುಟುಂಬಕ್ಕೆ ಜಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಗರಣಕ್ಕೆ ಸಂಬಂಧಿಸಿ ಲಾಲು ಪ್ರಸಾದ್, ರಾಬ್ಡಿ ದೇವಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.