ನವದೆಹಲಿ: ವಿವಿಧ ಇಲಾಖೆಗಳಲ್ಲಿನ ನಾನ್ ಗೆಜೆಟೆಡ್ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ 15ರಷ್ಟು ಒಟ್ಟು ಮೀಸಲಾತಿ, ವಯೋಮಿತಿಯಲ್ಲಿ ಸಡಿಲಿಕೆ ಹಾಗೂ ದೈಹಿಕ ಪರೀಕ್ಷೆಯಿಂದ ವಿನಾಯಿತಿ ನೀಡಲಿದೆ ಎಂದು ಮೂಲಗಳು ಗುರುವಾರ ಹೇಳಿವೆ.

ಅಗ್ನಿವೀರರಿಗೆ ಈ ಸೌಲಭ್ಯಗಳನ್ನು ನೀಡುವುದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವಂತೆ ರೈಲ್ವೆ ವಲಯಗಳ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ಮಂಡಳಿ ಪತ್ರ ಬರೆದಿದೆ.

ಅಗ್ನಿವೀರರಿಗಾಗಿ ರೈಲ್ವೆ ಭದ್ರತಾ ಪಡೆಯಲ್ಲಿ (ಆರ್ಪಿಎಫ್) ಕೂಡ ಮೀಸಲಾತಿ ನೀತಿಯನ್ನು ಜಾರಿಗೆ ತರಲಾಗುತ್ತದೆ ಎಂದು ಇವೇ ಮೂಲಗಳು ಹೇಳಿವೆ.

ಮೊದಲ ಬ್ಯಾಚ್ನ ಅಗ್ನಿವೀರರಿಗೆ ವಯೋಮಿತಿಯಲ್ಲಿ ಐದು ವರ್ಷ ಹಾಗೂ ನಂತರದ ಬ್ಯಾಚ್ಗಳ ಅಗ್ನಿವೀರರಿಗೆ ಮೂರು ವರ್ಷಗಳಷ್ಟು ಸಡಿಲಿಕೆ ನೀಡಲಾಗುವುದು. ರೈಲ್ವೆಯ ವಿವಿಧ ವಿಭಾಗಗಳಲ್ಲಿನ ಹಂತ–1 ಹಾಗೂ ಹಂತ–2 ಹಾಗೂ ಅದಕ್ಕೂ ಮೇಲ್ಪಟ್ಟ ಹುದ್ದೆಗಳಿಗೆ ಈ ಸೌಲಭ್ಯ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.