ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಮಂಗಳವಾರ ಬೆಳಿಗ್ಗೆ ಮುಂಬೈ ಜೈಲಿನಿಂದ ಹೊರ ಬಂದರು.

ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆರ್ಥರ್ ಜೈಲಿನಿಂದ ಬೆಳಿಗ್ಗೆ 11.30ರ ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಬಿ. ಭಾಜಿಪಲೆ ಅವರು ಸೋಮವಾರ ₹ 50,000 ಶ್ಯೂರಿಟಿ ಆಧಾರದ ಮೇಲೆ ಕುಂದ್ರಾ ಬಿಡುಗಡೆಗೆ ಅನುಮತಿ ನೀಡಿದ್ದರು. ರಾಜ್ ಕುಂದ್ರಾ ಅವರ ಸಹಚರ ಮತ್ತು ಸಹ ಆರೋಪಿ ರಿಯಾನ್ ಥೋರ್ಪ್ ಅವರಿಗೂ ನ್ಯಾಯಾಲಯ ಜಾಮೀನು ನೀಡಿದೆ.

‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರುವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 19ರಂದು ಕುಂದ್ರಾ ಅವರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.