ಜೈಪುರ: ರಾಜಸ್ಥಾನ ವಿಧಾನಸಭೆಯ ಹೊಸ ಸದಸ್ಯರ ಆಯ್ಕೆಗೆ ಶನಿವಾರ ಮತದಾನ ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕೆಳಗಿಳಿಸುವ ಗುರಿಯನ್ನು ಬಿಜೆಪಿ ಹೊಂದಿದ್ದರೆ, ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ತೀವ್ರ ಹೋರಾಟ ನಡೆಸುತ್ತಿದೆ.

ಒಟ್ಟು 200 ಕ್ಷೇತ್ರಗಳ ಪೈಕಿ 199ರಲ್ಲಿ ಬಿಗಿ ಭದ್ರತೆ ನಡುವೆ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪ್ರವೀಣ್ ಗುಪ್ತಾ ಹೇಳಿದ್ದಾರೆ.

ಶ್ರೀಗಂಗಾನಗರದ ಕರಣಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಗುರ್ಮೀತ್ ಸಿಂಗ್ ಅವರ ನಿಧನದ ಕಾರಣ ಈ ಕ್ಷೇತ್ರದ ಮತದಾನ ಮುಂದೂಡಲಾಗಿದೆ.

ಒಟ್ಟು 1862 ಅಭ್ಯರ್ಥಿಗಳು ಕಣದಲ್ಲಿದ್ದು 5,25,38,105 ಮತದಾರರು ಇದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹಲೋತ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ಧೊಟಾಸರಾ, ಪಕ್ಷದ ನಾಯಕ ಸಚಿನ್ ಪೈಲಟ್ ಅಲ್ಲದೆ ಕೆಲವು ಸಚಿವರು ಕಾಂಗ್ರೆಸ್ನಿಂದ ಕಣದಲ್ಲಿದ್ದಾರೆ.

ಬಿಜೆಪಿಯಿಂದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಠೋಡ್, ಸತೀಶ್ ಪೂನಿಯಾ, ವಸುಂಧರಾ ರಾಜೇ ಸಿಂಧಿಯಾ, ದಿಯಾ ಕುಮಾರಿ ಮತ್ತಿತರರು ಬಿಜೆಪಿಯಿಂದ ಸ್ಪರ್ಧಿಸಿರುವ ಪ್ರಮುಖರು. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಸುಮಾರು 40 ಮಂದಿ ಬಂಡಾಯ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.