ಜೈಪುರ:ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರ ಗೌರವಾರ್ಥ ರಾಜ್ಯದ ಎಲ್ಲಾ ಕಚೇರಿಗಳು, ಸಾರ್ವಜನಿಕ ವಲಯದ ಉದ್ದಿಮೆಗಳು ಸೇರಿದಂತೆ ಎಲ್ಲಾ ಸಂಸ್ಥೆಗಳಿಗೆ ರಾಜಸ್ಥಾನ ಸರ್ಕಾರ ಸೋಮವಾರ (ಆ. 23) ರಜೆ ಘೋಷಿಸಿದೆ.

ಅವರ ಗೌರವಾರ್ಥ ರಾಜ್ಯದಲ್ಲಿ ಎರಡು ದಿನ ಶೋಕಾಚರಣೆಯನ್ನು ಘೋಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ಭಾನುವಾರ ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಸಂಸ್ಥೆಗಳ ಮೇಲೆ ಭಾನುವಾರ ಮತ್ತು ಸೋಮವಾರ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಗುವುದು ಎಂದು ಇವೇ ಮೂಲಗಳು ಹೇಳಿವೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಲ್ಯಾಣ್ ಸಿಂಗ್ ಅವರು ಲಖನೌನಲ್ಲಿರುವ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಅವರ ಅಂತ್ಯಕ್ರಿಯೆ ಆ. 23ರಂದು ನೆರವೇರಲಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.