ನವದೆಹಲಿ: ರಾಜಸ್ಥಾನದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಯೋಜನೆಗಳನ್ನು ತಿರಸ್ಕರಿಸಲಿದ್ದಾರೆ. ಜೊತೆಗೆ ಕೇಂದ್ರದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೂ ಮಿತಿ ಇದೆ ಎಂಬುದನ್ನು ಅವರ ಸರ್ಕಾರಕ್ಕೆ ಅರ್ಥ ಮಾಡಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ರಾಜಸ್ಥಾನ ವಿಧಾನಸಭೆಗೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ.

ರಾಜಸ್ಥಾನ ಜನರು ಕಳೆದ ಮೂರು ದಶಕಗಳಿಂದ ಪರ್ಯಾಯ ರಾಜಕೀಯ ಪಕ್ಷಕ್ಕೆ ಅಧಿಕಾರ ನೀಡುತ್ತಾ ಬಂದಿದ್ದಾರೆ. ಈ ಬಾರಿ ಹಾಗಾಗುವುದಿಲ್ಲ. ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವೇ ಮತ್ತೆ ಸರ್ಕಾರ ರಚಿಸಲಿದೆ ಎಂದು ಜೈರಾಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ರಾಜಸ್ಥಾನದಲ್ಲಿ ಮತದಾನ ನಡೆಯುತ್ತಿದೆ. ಇಂದು ಅಲ್ಲಿನ ಜನರು ಪ್ರಧಾನಮಂತ್ರಿಯವರ ಸುಳ್ಳು ಯೋಜನೆಗಳನ್ನು ತಿರಸ್ಕರಿಸಲಿದ್ದಾರೆ. ಆ ಮೂಲಕ ಜಾರಿ ನಿರ್ದೇಶನಾಲಯ (ಇ.ಡಿ), ಕೇಂದ್ರೀಯ ತನಿಖಾ ದಳವನ್ನು (ಸಿ.ಬಿ.ಐ) ದುರುಪಯೋಗಪಡಿಸಿಕೊಳ್ಳುವುದಕ್ಕೂ ಮಿತಿ ಇದೆ ಎಂಬುದನ್ನು ಅರ್ಥಮಾಡಿಸಲಿದ್ದಾರೆ' ಎಂದು ಗುಡುಗಿದ್ದಾರೆ.
.ನೀತಿ ಸಂಹಿತೆ ಉಲ್ಲಂಘನೆ ಆರೋಪ: ರಾಹುಲ್ ಗಾಂಧಿ ಎಕ್ಸ್ ಖಾತೆ ಅಮಾನತಿಗೆ BJP ಆಗ್ರಹ.ನಮ್ಮ ಸರ್ಕಾರದ ಕಲ್ಯಾಣ ಯೋಜನೆಗಳು ರಾಜಸ್ಥಾನದ ಚಹರೆಯನ್ನೇ ಬದಲಿಸಿವೆ: ಕಾಂಗ್ರೆಸ್.
ರಾಜ್ಯಸಭೆ ಸದಸ್ಯರೂ ಆಗಿರುವ ಅವರು, 'ಜನರು ರಾಜಕೀಯ ಧೃವೀಕರಣವನ್ನು ಧಿಕ್ಕರಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಸಾಧನೆ ಹಾಗೂ ಗ್ಯಾರಂಟಿಗಳನ್ನು ನೋಡಿ ಮತ ಹಾಕಲಿದ್ದಾರೆ' ಎಂದು ಹೇಳಿದ್ದಾರೆ.

ಡಿಸೆಂಬರ್ 3ಕ್ಕೆ ಫಲಿತಾಂಶ
ರಾಜಸ್ಥಾನ ವಿಧಾನಸಭೆಯು 200 ಸದಸ್ಯ ಬಲ ಹೊಂದಿದ್ದು, ಒಂದು ಸ್ಥಾನ ಹೊರತುಪಡಿಸಿ ಉಳಿದ 199 ಕ್ಷೇತ್ರಗಳಿಗೆ ಇಂದು (ನವೆಂಬರ್ 25ರಂದು) ಮತದಾನ ನಡೆಯುತ್ತಿದೆ.

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗುರ್ಮೀತ್ ಸಿಂಗ್ ಕೊನೂರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಶ್ರೀಗಂಗಾನಗರದ ಕರಣ್‌ಪುರ ಕ್ಷೇತ್ರದಲ್ಲಿ ಮತದಾನ ಮುಂದೂಡಲಾಗಿದೆ. ಡಿಸೆಂಬರ್ 3ರಂದು ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.