ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಜೈಪುರದ ಕೇಂದ್ರ ಕಾರಾಗೃಹದ ಕೈದಿಯೊಬ್ಬನಿಂದ ಜೀವ ಬೆದರಿಕೆ ಕರೆ ಬಂದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ಕಾರಾಗೃಹದಿಂದ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜತೆಗೆ ಜೈಲಿನೊಳಗೆ ಮೊಬೈಲ್ ಫೋನ್ ಹೋಗಿರುವುದಾದರೂ ಹೇಗೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಜವಾಹರ್ ಸಿಂಗ್ ಬೇಧಮ್ ಮಾಹಿತಿ ನೀಡಿದ್ದಾರೆ.

ಜೈಲಿನೊಳಗೆ ಮೊಬೈಲ್ ಫೋನ್ಗಳ ತಪಾಸಣೆಯನ್ನು ಶೀಘ್ರದಲ್ಲಿ ಮಾಡಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಬೆಧಮ್ ತಿಳಿಸಿದ್ದಾರೆ.

ಭಜನ್ ಲಾಲ್ ಶರ್ಮಾ ಅವರನ್ನು ಕೊಲೆ ಮಾಡುವುದಾಗಿ ಬುಧವಾರ ಪೊಲೀಸ್ ಕಂಟ್ರೋಲ್ ರೂಮ್ಗೆ ದೂರವಾಣಿ ಕರೆ ಬಂದಿತ್ತು. ಮೊಬೈಲ್ ನಂಬರ್ ಲೊಕೇಶನ್ ಕೇಂದ್ರ ಕಾರಾಗೃಹದಲ್ಲಿ ಪತ್ತೆಯಾಗಿದೆ. ಅದನ್ನು ಆಧರಿಸಿ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.