ಜೈಪುರ: ರಾಜಸ್ಥಾನದ ಕರಣ್ಪುರ ವಿಧಾನಸಭಾ ಕ್ಷೇತ್ರಕ್ಕೆ ಶುಕ್ರವಾರ ( ಜನವರಿ 5) ಮತದಾನ ನಡೆದಿದೆ. ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಸುರೇಂದ್ರ ಪಾಲ್ ಸಿಂಗ್ ಕಣದಲ್ಲಿದ್ದು, ಶೇಕಡಾ 81.38ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
.ರಾಜಸ್ಥಾನ: ಅಭ್ಯರ್ಥಿಗೆ ಸಚಿವ ಸ್ಥಾನ ಪ್ರಶ್ನಿಸಿ ಆಯೋಗಕ್ಕೆ ಕಾಂಗ್ರೆಸ್ ಪತ್ರ.
ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೂ ಶಾಂತಿಯುತವಾಗಿ ನಡೆದಿದೆ. ಜನವರಿ 8ರಂದು ಶ್ರೀಗಂಗಾನಗರದ ಭೀಮರಾವ್ ಅಂಬೇಡ್ಕರ್ ಸರ್ಕಾರಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಆಗಿನ ಶಾಸಕ ಗುರ್ಮೀತ್ ಸಿಂಗ್ ಕೂನರ್ ಅವರ ನಿಧನದಿಂದಾಗಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ಈ ಕುರಿತು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿತ್ತು.

ಕೂನರ್ ಅವರ ಪುತ್ರ ರೂಪಿಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಸುರೇಂದ್ರ ಪಾಲ್ ಸಿಂಗ್ ಸ್ಪರ್ಧಿಸಿದ್ದರು.

ಕರಣ್ಪುರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ, ಇತ್ತೀಚಿಗೆ ನಡೆದಿದ್ದ 199 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದೆ. ಸುರೇಂದ್ರ ಪಾಲ್ ಸಿಂಗ್ ಅವರು ಈಗಾಗಲೇ ರಾಜಸ್ಥಾನದ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಗೆಲ್ಲುವ ಮೊದಲೇ ಬಿಜೆಪಿ ಅಭ್ಯರ್ಥಿಯನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕಾಂಗ್ರೆಸ್ ಟೀಕಿಸಿದೆ.

ನಿಯಮಗಳ ಪ್ರಕಾರ, ಸುರೇಂದ್ರ ಪಾಲ್ ಸಿಂಗ್ ಅವರು ಸಚಿವರಾಗಿ ಸೇರ್ಪಡೆಗೊಂಡ ನಂತರ ವಿಧಾನಸಭೆಗೆ ಆಯ್ಕೆಯಾಗಲು ಆರು ತಿಂಗಳ ಕಾಲಾವಕಾಶವಿದೆ.

ಅಧಿಕಾರಿಗಳ ಪ್ರಕಾರ, ಕರಣ್ಪುರ ವಿಧಾನಸಭಾ ಕ್ಷೇತ್ರದಲ್ಲಿ 2,40,826 ಮತದಾರರಿದ್ದಾರೆ. ಇದರಲ್ಲಿ 1,25,850 ಪುರುಷರು, 1,14,966 ಮಹಿಳೆಯರು ಹಾಗೂ 10 ಮಂದಿ ತೃತೀಯ ಲಿಂಗಿ ಮತದಾರರಿದ್ದಾರೆ.

ರಾಜಸ್ಥಾನ ವಿಧಾನಸಭೆಯಲ್ಲಿ ಒಟ್ಟು 200 ಸ್ಥಾನಗಳ ಪೈಕಿ ಉಳಿದ 199 ಸ್ಥಾನಗಳಿಗೆ ನವೆಂಬರ್ 25ರಂದು ಮತದಾನ ನಡೆದಿತ್ತು. 115 ಸ್ಥಾನಗಳಲ್ಲಿ ಜಯ ಗಳಿಸಿದ್ದ ಬಿಜೆಪಿ ಅಧಿಕಾರ ಪಡೆದಿತ್ತು. ಮತ್ತೊಂದೆಡೆ ಕಾಂಗ್ರೆಸ್ 69 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.