ನವದೆಹಲಿ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 56 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಉದಯಪುರ ಹಾಗೂ ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ಪುತ್ರ ಮಾವೇಂದ್ರ ಸಿಂಗ್ ಅವರು ಸಿವಾನಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಈವರೆಗೆ 151 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.

ಸಂಜೆ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸೇರಿ ಕಾಂಗ್ರೆಸ್ನ ಪ್ರಮುಖ ನಾಯಕರು ಈ ಸಭೆಯಲ್ಲಿ ಇದ್ದರು.

ಮೊದಲ ಪಟ್ಟಿಯಲ್ಲಿ 33, ಎರಡನೇ ಪಟ್ಟಿಯಲ್ಲಿ 43 ಹಾಗೂ ಮೂರನೇ ಪಟ್ಟಿಯಲ್ಲಿ 19 ಮಂದಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.