ಜೈಪುರ: ನೀವು ಹೆಚ್ಚು ಹೆಚ್ಚು ಮಕ್ಕಳನ್ನು ಪಡೆಯಿರಿ ಇದರಿಂದ ಯಾವುದೇ ಸಮಸ್ಯೆ ಇಲ್ಲ, ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಉಚಿತವಾಗಿ ಮನೆಗಳನ್ನು ಕಟ್ಟಿಸಿಕೊಡುತ್ತಾರೆ ಎಂದು ರಾಜಸ್ಥಾನ ಸಚಿವ ಬಾಬುಲಾಲ್ ಖರಾಡಿ ಸಲಹೆ ಮಾಡಿದ್ದಾರೆ.

ಯಾರೂ ಹಸಿವಿನಿಂದ ಬಳಲಬಾರದು ಮತ್ತು ಮನೆಯಿಲ್ಲದೇ ಮಲಗಬಾರದು ಎಂಬುದು ಪ್ರಧಾನಿಯವರ ಕನಸಾಗಿದೆ. ನೀವು ಸಾಕಷ್ಟು ಮಕ್ಕಳಿಗೆ ಜನ್ಮ ನೀಡಿ, ಪ್ರಧಾನಿ ಮೋದಿ ಮನೆಗಳನ್ನು ಕಟ್ಟಿಸಿಕೊಡುತ್ತಾರೆ. ಆದರೂ ನಿಮಗೆ ಸಮಸ್ಯೆ ಏನು? ಎಂದು ಸಚಿವರು ನೆರೆದಿದ್ದ ಜನರನ್ನು ಪ್ರಶ್ನಿಸಿದರು.

ಉದಯಪುರದಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಕೂಡ ಇದ್ದರು.

ಖರಾಡಿ ಅವರು ನಾಲ್ಕು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗಿನ ಸರ್ಕಾರದಲ್ಲಿ ಅವರು ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಸಚಿವರಾಗಿದ್ದಾರೆ. ಖರಾಡಿ ಇಬ್ಬರು ಪತ್ನಿಯರನ್ನು ಹೊಂದಿದ್ದು ಅವರಿಗೆ 8 ಜನ ಮಕ್ಕಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.