ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ರಕ್ಷಣಾ ಸಚಿವರ ಸಭೆ ಇಂದು ದೆಹಲಿಯಲ್ಲಿ ನೆರವೇರಿತು.

ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಾದೇಶಿಕ ಭದ್ರತಾ ಸವಾಲು ಮತ್ತು ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಭಾರತ, ರಷ್ಯಾ, ಚೀನಾ ಸೇರಿದಂತೆ ಇತರೆ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಸಭೆಯಲ್ಲಿ ಪಾಲ್ಗೊಂಡರು.

ಸದಸ್ಯ ರಾಷ್ಟ್ರಗಳಲ್ಲಿ ರಕ್ಷಣಾ ಪಾಲುದಾರಿಕೆಯನ್ನು ಉತ್ತೇಜಿಸಲು ಎಸ್ಸಿಒ ಪ್ರಮುಖ ಪಾತ್ರ ವಹಿಸುತ್ತದೆ. ಎಸ್ಸಿಒ ಸದಸ್ಯ ರಾಷ್ಟ್ರಗಳ ನಡುವಣ ವಿಶ್ವಾಸ ಮತ್ತು ಸಹಕಾರ ಮನೋಭಾವವನ್ನು ಮತ್ತಷ್ಟು ಬಲಪಡಿಸಲು ಭಾರತ ಬದ್ಧವಾಗಿದೆ ಎಂದು ರಾಜನಾಥ ಸಿಂಗ್ ತಿಳಿಸಿದ್ದಾರೆ.

ಈ ವೇದಿಕೆಯು ನಮ್ಮೆಲ್ಲರ ಅಭಿಪ್ರಾಯ, ಕಾಳಜಿ ಹಾಗೂ ದೃಷ್ಟಿಕೋನ ಹಂಚಿಕೊಳ್ಳಲು ಉತ್ತಮ ಅವಕಾಶವನ್ನು ಒದಗಿಸುತ್ತದೆ. ನಮ್ಮ ಮುಂದಿರುವ ಸಮಸ್ಯೆಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಎಸ್ಸಿಒ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.