ಸಾಯ್ಫಾಯ್: ಸೋಮವಾರ ನಿಧನರಾದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್ಸಿಪಿ ವರಿಷ್ಠ ಶರದ್ ಪವಾರ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು, ಕೇಂದ್ರ ಮಾಜಿ ರಾಜ್ಯ ಸಚಿವ ಪ್ರಫುಲ್ ಪಟೇಲ್, ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ (82) ಅವರು ಸೋಮವಾರ ನಿಧನರಾದರು. ಅ. 2ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು.

ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್ ಅವರು, ಮುಲಾಯಂ ಮಗ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ಗೆ ಸಾಂತ್ವನ ಹೇಳಿದರು.

ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ತಮ್ಮ ಮಗ ನಟ ಅಭಿಷೇಕ್ ಬಚ್ಚನ್ ಜೊತೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಸಾಯ್ಫಾಯ್ ಮೈದಾನದಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಮುಲಾಯಂ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.