ನವದೆಹಲಿ: ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರೂ ಈ ವೇಳೆ ರಾಜನಾಥ್ ಜೊತೆಗೂಡಿದ್ದರು.

ಸಿಯಾಚಿನ್ನಲ್ಲಿ ಭಾರತೀಯ ಸೇನೆ ನಿಯೋಜಿಸಿ 40 ವರ್ಷಗಳು ತುಂಬಿ ಕೆಲವೇ ದಿನಗಳು ಕಳೆದಿದ್ದು, ಈ ಸಂದರ್ಭದಲ್ಲಿ ರಾಜನಾಥ ಸಿಂಗ್ ಅಲ್ಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಲ್ಲಿ ನಿಯೋಜನೆಗೊಂಡ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.

ಕಾರಾಕೋರಂ ಪರ್ವತ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ನೀರ್ಗಲ್ಲಿನಲ್ಲಿ 1984ರ ಏಪ್ರಿಲ್ನಲ್ಲಿ ‘ಆಪರೇಷನ್ ಮೇಘದೂತ್’ ಸೇನಾ ಕಾರ್ಯಾಚರಣೆಯ ಭಾಗವಾಗಿ ಸೇನೆಯನ್ನು ನಿಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.