ನವದೆಹಲಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ಗೆ ತೆರಳುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

ಗಾಜಿಪುರದಲ್ಲಿ ರಾಕೇಶ್ ಟಿಕಾಯತ್ ಅವರನ್ನು ತಡೆದ ಪೊಲೀಸರು ವಶಕ್ಕೆ ತೆಗೆದುಕೊಂಡರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಹುದ್ದೆಗೆ ನಿತೀಶ್ ಕುಮಾರ್ ಪ್ರಬಲ ಅಭ್ಯರ್ಥಿಯಾಗಬಲ್ಲರು: ತೇಜಸ್ವಿ ಯಾದವ್

ಬಳಿಕ ಮಧು ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದ ಟಿಕಾಯತ್ ಅವರಿಗೆ ಹಿಂತಿರುಗುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ಆಗಿರುವ ಟಿಕಾಯತ್, ಕೃಷಿ ಕಾಯ್ದೆ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ), ನೇತೃತ್ವದಲ್ಲಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಟಿಕಾಯತ್, ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಆದೇಶದಂತೆ ಕೆಲಸ ಮಾಡುತ್ತಿದ್ದಾರೆಎಂದು ಆರೋಪಿಸಿದ್ದಾರೆ. ರೈತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಬಂಧನವು ಹೊಸ ಕ್ರಾಂತಿಯನ್ನು ಸೃಷ್ಟಿ ಮಾಡಲಿದೆ. ಕೊನೆಯ ಉಸಿರಿನವರೆಗೂ ಹೋರಾಡಲಿದ್ದೇನೆ, ತಲೆಬಾಗುವುದಿಲ್ಲ ಎಂದು ಟ್ವೀಟಿಸಿದ್ದಾರೆ.

ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಗೋಪಾಲ್ ರಾಯ್ ಖಂಡಿಸಿದ್ದಾರೆ.

ಎಸ್ಕೆಎಂ ಹಾಗೂ ಇತರೆ ರೈತ ಸಂಘಟನೆಗಳು ಸೋಮವಾರದಂದು ಜಂತರ್ ಮಂತರ್ನಲ್ಲಿ 'ಮಹಾಪಂಚಾಯಿತಿ' ನಡೆಸಲು ಯೋಜಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.