ಇಂದು ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಅಯೋಧ್ಯೆ ನಗರ ಸಡಗರದಿಂದ ಸಜ್ಜಾಗಿದ್ದು, ಸಂಭ್ರಮ ಮನೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಳ್ಳಲಿದ್ದಾರೆ.
ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.