ನವದೆಹಲಿ: ರಾಮನವಮಿ ಆಚರಣೆ ವೇಳೆ ನಡೆದಿದ್ದ ಹಿಂಸಾಚಾರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಿದ್ದ ಕಲ್ಕತ್ತ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

‘ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಲು ಪೀಠ ಇಚ್ಛಿಸುವುದಿಲ್ಲ’ ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ ಪಾರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ತಿಳಿಸಿತು.

ಹೌರಾ ಜಿಲ್ಲೆಯ ಶಿಬ್‌ಪುರ್ ಮತ್ತು ಹೂಗ್ಲಿಯ ರಿಶ್ರಾದಲ್ಲಿ ರಾಮನವಮಿ ಆಚರಣೆ ವೇಳೆ ಮತ್ತು ನಂತರ ನಡೆದಿದ್ದ ಹಿಂಸಾಚಾರ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಕೋರಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕಲ್ಕತ್ತ ಹೈಕೋರ್ಟ್ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಿ ಏಪ್ರಿಲ್ 27ರಂದು ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.